Publish Date: Wed, 31 Mar 2021 (08:50 IST)
Updated Date: Wed, 31 Mar 2021 (08:53 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳು ಎಷ್ಟೋ ದಿನದಿಂದ ಕಾಯುತ್ತಿದ್ದ ಆ ಗಳಿಗೆ ಕೊನೆಗೂ ಬಂದಿದೆ. ನಾಳೆಯಿಂದ ಎಲ್ಲೆಡೆ ಯುವರತ್ನನ ದರ್ಬಾರ್ ಶುರುವಾಗಲಿದೆ.
ಪವರ್ ಸ್ಟಾರ್ ಪುನೀತ್ ಅಭಿನಯದ ಹೊಂಬಾಳೆ ಫಿಲಂಸ್ ನಿರ್ಮಾಣದ ಸಂತೋಷ್ ಆನಂದ್ ರಾಮ್ ನಿರ್ದೇಶಿಸಿರುವ ಯುವರತ್ನ ಸಿನಿಮಾ ನಾಳೆಯಿಂದ ಅದ್ಧೂರಿಯಾಗಿ ತೆರೆ ಕಾಣಲಿದೆ. ಕೊರೋನಾ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾಗುತ್ತಿರುವ ಮೂರನೇ ಬಿಗ್ ಬಜೆಟ್ ಸಿನಿಮಾ ಇದಾಗಿದೆ.
ಇದಕ್ಕೂ ಮೊದಲು ಬಿಡುಗಡೆಯಾಗಿದ್ದ ಪೊಗರು, ರಾಬರ್ಟ್ ಭರ್ಜರಿ ಗಳಿಕೆ ಮಾಡಿತ್ತು. ಈಗ ಯುವರತ್ನ ಕೂಡಾ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಕನ್ನಡ, ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ವಿದೇಶದಲ್ಲೂ ಬಿಡುಗಡೆಯಾಗುತ್ತಿದೆ. ಈಗಾಗಲೇ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕಿಂಗ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಚಿತ್ರ ಹಿಟ್ ಆಗುವುದರಲ್ಲಿ ಸಂಶಯವೇ ಇಲ್ಲ.