Select Your Language

Notifications

webdunia
webdunia
webdunia
webdunia

ಅಮೆರಿಕಾದಲ್ಲೂ ಮೋಡಿ ಮಾಡಲಿದೆ ಯುವರತ್ನ

ಅಮೆರಿಕಾದಲ್ಲೂ ಮೋಡಿ ಮಾಡಲಿದೆ ಯುವರತ್ನ
ಬೆಂಗಳೂರು , ಶುಕ್ರವಾರ, 26 ಮಾರ್ಚ್ 2021 (09:37 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಏಪ್ರಿಲ್ 1 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ.


ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಈ ಸಿನಿಮಾ ಬಿಡುಗಡೆಯಾಗಲಿದೆ. ಕರ್ನಾಟಕದಲ್ಲಿ ಸುಮಾರು 400 ಥಿಯೇಟರ್ ಗಳಲ್ಲಿ ಹಾಗೂ ಆಂಧ್ರಪ್ರದೇಶದಲ್ಲಿ 200 ಥಿಯೇಟರ್ ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲದೆ, ಅಮೆರಿಕಾದಲ್ಲಿ ಏಪ್ರಿಲ್ 1 ರಂದೇ ಚಿತ್ರತೆರೆ ಕಾಣುತ್ತಿದೆ. ವೀಕೆಂಡ್ ಸಿನಿಮಾಸ್ ಸಂಸ್ಥೆ ಉತ್ತರ ಅಮೆರಿಕಾದಲ್ಲಿ ಏಪ್ರಿಲ್ 1 ರಂದು ಚಿತ್ರ ಬಿಡುಗಡೆ ಮಾಡಲು ಮುಂದಾಗಿದೆ. ಈಗಾಗಲೇ ರಾಜ್ಯ ಪ್ರವಾಸ ಮಾಢಿರುವ ಚಿತ್ರತಂಡ ಯುವರತ್ನಗೆ ಭರ್ಜರಿ ಪ್ರಚಾರ ಕೊಟ್ಟಿದೆ. ಇನ್ನೇನಿದ್ದರೂ ಪ್ರೇಕ್ಷಕನ ಕೈಯಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಎರಡು ಪ್ರಮುಖ ಸಿನಿಮಾಗಳು ಇಂದು ತೆರೆಗೆ