Webdunia - Bharat's app for daily news and videos

Install App

ನಾಗಾರ್ಜುನ ಒಡೆತನದ ಕನ್ವೆನ್ಷನ್‌ ಸೆಂಟರ್‌ ಭಾಗಶಃ ಧ್ವಂಸ: ಕಟ್ಟಡ ಕೆಡವದಂತೆ ಹೈಕೋರ್ಟ್ ಆದೇಶ

Sampriya
ಶನಿವಾರ, 24 ಆಗಸ್ಟ್ 2024 (18:28 IST)
Photo Courtesy X
ಹೈದರಾಬಾದ್‌:  ಇಲ್ಲಿನ ಮದಾಪುರದಲ್ಲಿರುವ ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ಒಡೆತನದ ಎನ್. ಕನ್ವೆನ್ಷನ್ ಸೆಂಟರ್  ಕೆಲ ಭಾಗಗಳನ್ನು ಇಂದು ಹೈಡ್ರಾ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿ ನಟ ಹೈಕೋರ್ಟ್‌ ಮೆಟ್ಟಿಲೇರಿದ್ದು, ತಾತ್ಕಾಲಿಕ ತಡೆ ಸಿಕ್ಕಿದೆ.

ವಿವಾದ ನ್ಯಾಯಾಲಯದಲ್ಲಿದ್ದರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಟ್ಟಡವನ್ನು ಕೆಡವದಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.  

ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಕ್ಕೆ ಹೈಡ್ರಾ (ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿಗಳ ಮೇಲ್ವಿಚಾರಣೆ ಮತ್ತು ರಕ್ಷಣೆ ಸಂಸ್ಥೆ) ಸಂಸ್ಥೆ ಶನಿವಾರ ಆಸ್ತಿಯನ್ನು ನೆಲಸಮಗೊಳಿಸಿದೆ.

10 ಎಕರೆ ಜಾಗದಷ್ಟು ಎನ್. ಕನ್ವೆನ್ಷನ್ ಸೆಂಟರ್ ಹಲವಾರು ಭೂ ಬಳಕೆ ಹಾಗೂ ಪರಿಸರ ನಿಮಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಜೊತೆಗೆ 1.2 ಎಕರೆ ತುಮ್ಮಿಡ್ಕುಂಟಾ ಕೆರೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. 2 ಎಕರೆ ಬಫರ್ ವಲಯವನ್ನು ಬಳಸಿಕೊಂಡು ಎನ್ ಕನ್ವೆನ್ಷನ್ ಸೆಂಟರ್‌ನ್ನು ನಿರ್ಮಾಣ ಮಾಡಿದ್ದಾರೆ ಎಂಬ ಆರೋಪ ಬಂದಿತ್ತು. ಇದೀಗ ಹೈಡ್ರಾ ಸಂಸ್ಥೆಯ ಅಧಿಕಾರಿಗಳು ಸುಮಾರು ಮೂರುವರೆ ಎಕರೆ ಜಾಗದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್‌ನ್ನು ತೆರವುಗೊಳಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಗಾರ್ಜುನ ಪೋಸ್ಟ್ ಮಾಡಿದ್ದಾರೆ. ಕಾನೂನು ಉಲ್ಲಂಘಿಸುವ ಯಾವುದೇ ತಪ್ಪನ್ನು ನಾನು ಮಾಡಿಲ್ಲ. ವಿವಾದ ಕೋರ್ಟ್‌ನಲ್ಲಿದ್ದರೂ ತೆರವು ಮಾಡಲಾಗಿದೆ. ನನ್ನ ವಿರುದ್ಧ ಆದೇಶ ಬಂದಿದ್ದರೆ ನಾನೇ ತೆರವು ಮಾಡಿಕೊಳ್ಳುತ್ತಿದ್ದೆ. ಆದರೆ ತೆರವುಗೊಳಿಸಿರುವುದು ಅತೀವ ನೋವನ್ನುಂಟು ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ನಾನು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments