Select Your Language

Notifications

webdunia
webdunia
webdunia
webdunia

ಮೈಸೂರಿನಲ್ಲಿ ಶ್ರೀರಾಮನ ಹಾಡು ಹಾಡಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ

Sriram Song

Sampriya

ಮೈಸೂರು , ಗುರುವಾರ, 9 ಮೇ 2024 (16:45 IST)
Photo Courtesy X
ಮೈಸೂರು: ಇಲ್ಲಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು ಜೈ ಶ್ರೀರಾಮ್ ಹಾಡಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಗಾಯಕ ಶ್ರೀಹರ್ಷ ಅವರನ್ನು ಸಮಾರಂಭಕ್ಕೆ ಆಹ್ವಾನಿಸಿದ್ದು, ಈಓ ವೇಳೆ ಅವರು  ಜಯತು ಜಯತು ಜೈ ಶ್ರೀರಾಮ್ ಎಂದು ಹಾಡಿದರು. ಇದಕ್ಕೆ ಅಡ್ಡಿಪಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ.

ಈ ವೇಳೆ ಹಿಂದೂ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಗಲಾಟೆ ಶುರುವಾಗುತ್ತಿದಂತೆ ಪೊಲೀಸರು ಸ್ಟೇಡಿಯಂಗೆ ಬಂದು ವಿದ್ಯಾರ್ಥಿಗಳನ್ನು ಅಲ್ಲಿಂದ ಕಳುಹಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ. ಇವರ ಹಾವಳಿ ಜಾಸ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಪ್ರತಾಪ್ ಎಲ್ಸ್‌ನಲ್ಲಿ ಫೋಟೋ ಹಂಚಿ ಬರೆದುಕೊಂಡಿದ್ದಾರೆ. ನಿನ್ನೆ ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಖ್ಯಾತ ಗಾಯಕ ಶ್ರೀಹರ್ಷ ಅವರು "ಜಯತು ಜಯತು ಜೈ ಶ್ರೀರಾಮ್" ಎಂದು ಹಾಡಿದಾಗ ಕಾರ್ಯಕ್ರಮವನ್ನು ಹಾಳುಗೆಡವಿದ್ದಲ್ಲದೆ ಒಬ್ಬ ಹಿಂದೂ ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ಇದನ್ನೆಲ್ಲಾ ನೋಡಿಯೂ  ಕೈಕಟ್ಟಿ ಕುಳಿತುಕೊಳ್ಳಬೇಕಾ?

Share this Story:

Follow Webdunia kannada

ಮುಂದಿನ ಸುದ್ದಿ

ಎಚ್ ಡಿ ರೇವಣ್ಣ ಕೇಸ್: ನಾನೇ ಪ್ರೊಡ್ಯೂಸರ್, ಡೈರೆಕ್ಟರ್ ಎಂದು ದೃಶ್ಯಂ ಸಿನಿಮಾ ನೆನಪಿಸಿದ ಕುಮಾರಸ್ವಾಮಿ