ನಟಿ ಪೂಜಾ ಗಾಂಧಿ ಬುಧವಾರ ಸಂಜೆ ಸಪ್ತಪದಿ ತುಳಿಯಲಿದ್ದಾರೆ. ಉದ್ಯಮಿ ವಿಜಯ್ ಜೊತೆ ಪೂಜಾ ಮಂತ್ರ ಮಾಂಗಲ್ಯ ಮಾದರಿಯಲ್ಲಿ ಮದುವೆಯಾಗಲಿದ್ದಾರೆ .
ತಮ್ಮ ಆಪ್ತರಿಗೆ ಈಗಾಗಲೇ ಆಹ್ವಾನ ನೀಡಿದ್ದು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.ಇನ್ನು ಈ ಮದುವೆ ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ.