Publish Date: Fri, 17 Mar 2023 (20:56 IST)
Updated Date: Fri, 17 Mar 2023 (20:59 IST)
ಇಂದು ಪುನೀತ್ ರಾಜ್ಕುಮಾರ್ ಅವರ ಜನ್ಮದಿನ. ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ಜನ್ಮದಿನ. ಪುನೀತ್ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಪುನೀತ್ ನಮ್ಮ ಜೊತೆ ಇದ್ದಿದ್ದರೆ ಈ ದಿನದ ಮೆರುಗು ಮತ್ತಷ್ಟು ಹೆಚ್ಚುತ್ತಿತ್ತು. ಆದರೆ, ಅವರಿಲ್ಲ ಎನ್ನುವ ಬೇಸರದಲ್ಲೇ ಈ ದಿನವನ್ನು ಆಚರಿಸುತ್ತಿರುವುದು ನಿಜಕ್ಕೂ ದುಃಖಕರ ವಿಚಾರ. ಪುನೀತ್ ಜನ್ಮದಿನಕ್ಕೆ ಅಭಿಮಾನಿಗಳಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ದಿನದಂದು ಕಬ್ಜ ಸಿನಿಮಾ ಕೂಡ ರಿಲೀಸ್ ಆಗಿದೆ.. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ರಾಜ್ಕುಮಾರ್ ಕುಟುಂಬದವರು ಆಗಮಿಸಿ, ಪೂಜೆ ಸಲ್ಲಿಕೆ ಮಾಡಿದ್ರು. ಈಗಾಗಲೇ ಪುನೀತ್ ರಾಜ್ಕುಮಾರ್ ಅವರ ಸಮಾಧಿಯನ್ನು ಅಲಂಕರಿಸಲಾಗಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್ ಸೇರಿದಂತೆ ಕುಟುಂಬದ ಅನೇಕರು ಕಂಠೀರವ ಸ್ಟುಡಿಯೋಗೆ ಬಂದು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಅಪ್ಪು ಜನ್ಮದಿನ ಅವರ ಸಮಾಧಿಗೆ ಭೇಟಿ ನೀಡಬೇಕು ಅನ್ನೋದು ಅನೇಕ ಅಭಿಮಾನಿಗಳ ಆಸೆ. ಈ ಕಾರಣಕ್ಕೆ ಕಂಠೀರವ ಸ್ಟುಡಿಯೋದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ.