Publish Date: Thu, 24 Aug 2023 (20:10 IST)
Updated Date: Thu, 24 Aug 2023 (19:12 IST)
ಕನ್ನಡ ಚಿತ್ರರಂಗದ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಅವರು ಬಹುಕಾಲದ ಗೆಳೆಯ ಭುವನ್ ಪೊನ್ನಣ್ಣ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇವರಿಬ್ಬರೂ ಕೊಡಗಿನವರು. ಹಾಗಾಗಿ ಕೊಡವ ಸಂಪ್ರದಾಯದ ಪ್ರಕಾರ ಮದುವೆ ನೆರವೇರುತ್ತಿದೆ. ವಿರಾಜಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ವಿವಾಹ ಕಾರ್ಯ ನಡೆಯುತ್ತಿದೆ. ಭುವನ್ ಪೊನ್ನಣ್ಣ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಮದುವೆ ಸಲುವಾಗಿ ಅವರೀಗ ಬ್ರೇಕ್ ಪಡೆದುಕೊಂಡಿದ್ದಾರೆ. ಹರ್ಷಿಕಾ-ಭುವನ್ ಮದುವೆ ಶಾಸ್ತ್ರಗಳು ಆರಂಭವಾಗಿವೆ. ಇಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ. ಚಿತ್ರರಂಗದ ಅನೇಕ ಗಣ್ಯರು ಕೊಡಗಿಗೆ ತೆರಳಿ ಈ ಸೆಲೆಬ್ರಿಟಿ ವಿವಾಹದಲ್ಲಿ ಭಾಗಿಯಾಗಿದ್ದಾರೆ.