Webdunia - Bharat's app for daily news and videos

Install App

ಅಧಿಕಾರ ಹಸ್ತಾಂತರ ಬಿಕ್ಕಟ್ಟು, ಬಿಜಿಪಿ ಸಚಿವರ ರಾಜೀನಾಮೆ ?

Webdunia
ಶನಿವಾರ, 29 ಸೆಪ್ಟಂಬರ್ 2007 (10:54 IST)
NRB
ಒಂದು ಪಕ್ಷ ಜೆಡಿಎಸ್ ಅಧಿಕಾರ ಹಸ್ತಾಂತರಕ್ಕೆ ಮುಂದಾಗದೇ ಇದ್ದಲ್ಲಿ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಪಕ್ಷದ ಮುಖಂಡರು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 1ರಂದು ನಡೆಯಲಿರುವ ಪಕ್ಷದ ಸಚಿವರ ಸಭೆಯಲ್ಲಿ ಉಪಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಪಕ್ಷದ ಎಲ್ಲ ಸಚಿವರ ರಾಜೀನಾಮೆ ಪತ್ರಗಳನ್ನು ಪಡೆಯಲಿದ್ದಾರೆ.

ಮಿತ್ರ ಪಕ್ಷ ಜೆಡಿಎಸ್ ಅಧಿಕಾರ ಹಸ್ತಾಂತರವನ್ನು ಸ್ಥಗಿತಗೊಳಿಸಿರುವ ಕಾರಣ ರಾಜ್ಯ ಬಿಜೆಪಿ ಘಟಕ ತನ್ನ ಪಕ್ಷದ ಸಚಿವರ ಸಭೆಯನ್ನು ಅಕ್ಚೋಬರ್ 1 ರಂದು ಕರೆದಿದ್ದು, ರಾಜ್ಯ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಲಿದೆ.

2006 ರಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಿತ್ರಪಕ್ಷ ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡಬೇಕು. ಇದೇ ಸಂದರ್ಭದಲ್ಲಿ ಭಾರತೀಯ ಜನತಾಪಕ್ಷ, ಪಕ್ಷದ ಎಲ್ಲ ಪದಾದಿಕಾರಿಗಳ ಸಭೆ ಕರೆದಿದ್ದು, ರಾಜಕೀಯ ಬಿಕ್ಕಟ್ಟು ಉಂಟಾದಲ್ಲಿ ಮುಂದೆ ಯಾವ ನಿಲುವು ತಳೆಯಬೇಕು ಎಂಬುದರ ಕುರಿತು ಚರ್ಚೆ ಮಾಡಲಿದೆ.

ಸಚಿವ ಬಿ. ಶ್ರೀರಾಮುಲು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾಡಿರುವ ಕೊಲೆ ಯತ್ನ ದೂರಿನಿಂದ ವಿವಾದ ಬುಗಿಲೆದ್ದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಷ್ಟಪಟ್ಟಲ್ಲಿ ಯಾವುದೇ ಸಚಿವರನ್ನು ಕೈಬಿಡಬಹುದು. ಪಕ್ಷ ಇಂತಹ ವಿಚಾರದಲ್ಲಿ ತಲೆತೂರಿಸಿಲ್ಲ. ಪಕ್ಷ ಕೂಡ ಶ್ರೀರಾಮುಲು ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ. ಎಂದು ಘೋಷಿಸಿದ್ದು. ಅಕ್ಟೋಬರ್ 3 ರ ನಂತರ ತಾನು ಉಪಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುವುದಿಲ್ಲ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments