Select Your Language

Notifications

webdunia
webdunia
webdunia
webdunia

ಉಪಚುನಾವಣೆಗೆ ಒಮ್ಮತದ ಅಭ್ಯರ್ಥಿ: ಪರಮೇಶ್ವರ್

ಉಪಚುನಾವಣೆಗೆ ಒಮ್ಮತದ ಅಭ್ಯರ್ಥಿ: ಪರಮೇಶ್ವರ್
ಬೆಂಗಳೂರು , ಭಾನುವಾರ, 21 ಜುಲೈ 2013 (10:18 IST)
PR
PR
ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಿಗೆ ಕೇಂದ್ರ ಚುನಾವಣೆ ಆಯೋಗ ಆಗಸ್ಟ್ 21ರಂದು ಉಪಚುನಾವಣೆ ಘೋಷಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಂಡ್ಯ ಕ್ಷೇತ್ರದಿಂದ ಚೆಲುವರಾಯಸ್ವಾಮಿ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಉಪಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಎರಡೂ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಒಮ್ಮತದ ಅಭ್ಯರ್ಥಿಯನ್ನು ನಿಲ್ಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದರು.

Share this Story:

Follow Webdunia kannada