ಉರಿಗೌಡ-ನಂಜೇಗೌಡ ದ್ವಾರಕ್ಕೆ HDK ಉರಿಉರಿ

Webdunia
ಮಂಗಳವಾರ, 14 ಮಾರ್ಚ್ 2023 (15:54 IST)
ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಪ್ರವಾಸದ ವೇಳೆ, ಉರಿಗೌಡ-ನಂಜೇಗೌಡ ದ್ವಾರ ನಿರ್ಮಿಸಿದ BJP ವಿರುದ್ಧ JDS ಶಾಸಕಾಂಗ ಪಕ್ಷದ ನಾಯಕ H.D. ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಒಕ್ಕಲಿಗ ಕುಲಕ್ಕೆ ಮಾಡಿದ ಘೋರ ಅವಮಾನ ಎಂದು ಅವರು ಕಿಡಿಕಾರಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ HDK ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ BJP. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿಯಿಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ‘ ಎಂದು ಅವರು ದೂರಿದ್ದಾರೆ.
 
‘ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ. ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ ಪಾತ್ರಗಳ ಹೆಸರನ್ನು ಹಾಕಿದ ದುರುದ್ದೇಶವೇನು? ಇದು ಪರಮಪೂಜ್ಯರಿಗೆ ಮಾಡಿದ ಅಪಮಾನ ಎಂದು HDK ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ಮುಂದಿನ ಸುದ್ದಿ
Show comments