Webdunia - Bharat's app for daily news and videos

Install App

ಒಮ್ಮತದ ತೀರ್ಮಾನಕ್ಕೆ ಬದ್ಧ: ಸಚಿವ ರಾಮಚಂದ್ರ ಗೌಡ

Webdunia
ಶನಿವಾರ, 29 ಆಗಸ್ಟ್ 2009 (17:13 IST)
ಸಚಿವ ಸೋಮಣ್ಣ ಅವರನ್ನು ಸಂಪುಟದಿಂದ ಕೈಬಿಡಬೇಕೆ ಬೇಡವೇ ಎಂಬ ವಿಚಾರದ ಕುರಿತು ಸಾಮೂಹಿಕವಾಗಿ ಚರ್ಚಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರ ಗೌಡ ಹೇಳಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಿದ ಅವರು ಸೋಮಣ್ಣ ಅವರ ವಿಚಾರದಲ್ಲಿ ನೈತಿಕತೆ ಅಥವಾ ಅನೈತಿಕತೆ ಮುಖ್ಯವಲ್ಲ. ಸರ್ಕಾರ ಹಾಗೂ ರಾಜ್ಯದ ಜನತೆಗೆ ಅನುಕೂಲವಾಗುವಂತ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ನುಡಿದರು.

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ ಅವೆರಡನ್ನೂ ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಅವರು ನುಡಿದರು. ಇದರಲ್ಲಿ ವೈಯಕ್ತಿವಾಗಿ ಏನೂ ಹೇಳುವಂತಿಲ್ಲ. ಪಕ್ಷದ ಸಾಮೂಹಿಕ ನಿರ್ಧಾರಕ್ಕೆ ಬದ್ಧ ಎಂದು ಅವರು ತಿಳಿಸಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಕೆಲಸ ಮಾಡಿದ್ದೇವೆ. ಸೋಮಣ್ಣರನ್ನು ಸೋಲಿಸಲು ಬಿಜೆಪಿಯವರೇ ಮಸಲತ್ತು ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ನುಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments