Webdunia - Bharat's app for daily news and videos

Install App

ಕನ್ನಡ ಸಿನಿಮಾಗಳ ಬಗ್ಗೆ ಕಾಳಜಿ ಇಲ್ಲ: ಕಾಸರವಳ್ಳಿ

Webdunia
ಸೋಮವಾರ, 24 ನವೆಂಬರ್ 2008 (12:14 IST)
NRB
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಅವಲೋಕಿಸುವಂತೆ ಮಾಡಿದ ಕನ್ನಡ ಸಿನಿಮಾಗಳಿಗೆ ಕನ್ನಡ ಚಿತ್ರರಂಗದಲ್ಲಿಯೇ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿಲ್ಲ ಎಂದು ಹೆಸರಾಂತ ನಿರ್ದೇಶಕ ಗಿರೀಶ್ ಕಾಸರವಳ್ಳಿ ವಿಷಾದ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ಹಲವು ಕನ್ನಡ ಚಿತ್ರಗಳು ಗಮನ ಸೆಳೆದಿದೆ. ಆದರೆ ಅದಕ್ಕೆ ಕನ್ನಡ ಚಿತ್ರರಂಗವೇ ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ ಎಂದು ದೂರಿದರು.

ಕಲಾತ್ಮಕ ಸಿನಿಮಾಗಳು ಇಂದು ಪ್ರೇಕ್ಷಕನಿಗೆ ತಲುಪುತ್ತಿಲ್ಲ. ಅದು ಸಿನಿಮಾದ ದಿಗ್ದರ್ಶನ ದೋಷವಲ್ಲ. ಸಿನಿಮಾ ವ್ಯವಸ್ಥಿತವಾಗಿ ಎಲ್ಲೆಡೆ ಪ್ರದರ್ಶಿಸಬೇಕಾದ ವ್ಯವಸ್ಥೆಯ ದೋಷವಷ್ಟೇ ಎಂದರು.

ಪರ್ಯಾಯ ಸಿನಿಮಾಗಳ ಬಗ್ಗೆ ಅಪಾರವಾದ ನಿರೀಕ್ಷೆಗಳಿರುವುದರಿಂದ ಕಥಾ ವಸ್ತುವಿನ ಆಯ್ಕೆ ನಿರ್ವಹಣೆ ಅದನ್ನು ಅಭಿವ್ಯಕ್ತಿಗೊಳಿಸುವ ಕ್ರಮದಲ್ಲಿ ಸಾಮಾಜಿಕ ಪ್ರಜ್ಞೆ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments