Webdunia - Bharat's app for daily news and videos

Install App

ಕಾಂಗ್ರೆಸ್ ಅಧಿಕಾರಕ್ಕೆ ಬರ್ತದೆ, ನಾನು ಸಿಎಂ ಆಗ್ತೇನೆ: ಸಿದ್ಧು

Webdunia
ಶನಿವಾರ, 31 ಡಿಸೆಂಬರ್ 2011 (10:40 IST)
PR
ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆಗಳಾಗಲಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರೆಯುವುದು ಖಚಿತ. ನಾನೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧರಾಮಯ್ಯ ಮಾತನಾಡಿ, ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರದ ಬಗ್ಗೆ ಚರ್ಚೆಯನ್ನು ವಿಧಾನಸಭೆಯಲ್ಲಿ ಆರಂಭಿಸುವವನಿದ್ದೆ.ವಿಧಾನಸಭಾಧ್ಯಕ್ಷರು ಇದಕ್ಕೆ ಅನುಮತಿ ನೀಡಿದರು. ಆದರೆ, ಬಿಜೆಪಿ ಸದಸ್ಯರು ಸದನದಿಂದ ಪಲಾಯನವಾದ ಮಾಡಿದರು ಎಂದು ಆರೋಪಿಸಿದರು.

ಶಿವರಾಜ್ ಪಾಟೀಲ್ ಮತ್ತು ಬನ್ನೂರು ಮಠ ಇಬ್ಬರದ್ದೂ ಒಂದೇ ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ 15 ದಿನಗಳೊಳಗಾಗಿ ರಾಜ್ಯ ರಾಜಕೀಯದಲ್ಲಿ ವಿಶೇಷ ಬದಲಾವಣೆಗಳಾಗಲಿವೆ. ಬಿಜೆಪಿ ಪಕ್ಷ ಒಡೆದು ಛಿಧ್ರಗೊಂಡ ಮನೆಯಾಗಿದೆ. ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments