Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಆಡಳಿತದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ: ಆರ್‌.ಅಶೋಕ್

ಕಾಂಗ್ರೆಸ್ ಆಡಳಿತದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ: ಆರ್‌.ಅಶೋಕ್

Sampriya

ಬೆಂಗಳೂರು , ಶುಕ್ರವಾರ, 27 ಡಿಸೆಂಬರ್ 2024 (16:30 IST)
ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮದ ನಿವಾಸಿ ಸಿವಿಲ್‌ ಎಂಜಿನಿಯರ್‌ ಸಚಿನ್‌ ಮಾನಪ್ಪ ಪಾಂಚಾಳ್‌ (26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ, ಕಲಬುರಗಿ ಕಾಂಗ್ರೆಸ್‌ ಮುಖಂಡ ರಾಜು ಕಪನೂರ ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

ಎರಡು ಪ್ರಾಮಾಣಿಕ ಗುತ್ತಿಗೆದಾರರ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಪ್ರಿಯಾಂಕ ಖರ್ಗೆ ಅವರು ಈ ಸಾವುಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆಗ್ರಹಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾ.ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್‌, ಸೋನಿಯಾ ಗಾಂಧಿ, ಖರ್ಗೆ