Webdunia - Bharat's app for daily news and videos

Install App

ಕಾಂಗ್ರೆಸ್ ಆಡಳಿತದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ: ಆರ್‌.ಅಶೋಕ್

Sampriya
ಶುಕ್ರವಾರ, 27 ಡಿಸೆಂಬರ್ 2024 (16:30 IST)
ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮದ ನಿವಾಸಿ ಸಿವಿಲ್‌ ಎಂಜಿನಿಯರ್‌ ಸಚಿನ್‌ ಮಾನಪ್ಪ ಪಾಂಚಾಳ್‌ (26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ, ಕಲಬುರಗಿ ಕಾಂಗ್ರೆಸ್‌ ಮುಖಂಡ ರಾಜು ಕಪನೂರ ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

ಎರಡು ಪ್ರಾಮಾಣಿಕ ಗುತ್ತಿಗೆದಾರರ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಪ್ರಿಯಾಂಕ ಖರ್ಗೆ ಅವರು ಈ ಸಾವುಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆಗ್ರಹಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments