Webdunia - Bharat's app for daily news and videos

Install App

ನಾಳೆ ಕೆಪಿಸಿಸಿ ಅಧ್ಯಕ್ಷ ಘೋಷಣೆ?: ಪ್ರಮುಖ ನಾಯಕರ ತೀವ್ರ ಪೈಪೋಟಿ

Webdunia
ಭಾನುವಾರ, 28 ಮೇ 2017 (12:51 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಚುರುಕು ಪಡೆದಿದೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ರಾಜ್ಯ ನಾಯಕರ ಸಭೆ ನಡೆಸುತ್ತಿದ್ದು, ಬಹುತೇಕ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ, ಪರಮೇಶ್ವರ್. ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿ ಪ್ರಮುಖ ನಾಯಕರು ಇಂದು ದೆಹಲಿಗೆ ತೆರಳುತ್ತಿದ್ದಾರೆ.

ಈ ಮಧ್ಯೆ, ಹಾಲಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮತ್ತು ಸಚಿವ ಡಿ..ಕೆ. ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ಇದೆ ಎನ್ನಲಾಗುತ್ತಿದ್ದು, ಅಧ್ಯಕ್ಷ ಸ್ಥಾನಕ್ಕೆ ಭಾರೀ ಲಾಬಿ ನಡೆದಿದೆ. ಬೆಳ್ಳ ಬೆಳಗ್ಗೆ ಸಚಿವ ಡಿ.ಕೆ. ಶಿವಕುಮಾರ್ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ಇತ್ತ, ನಿನ್ನೆ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಜೊತೆಯೂ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ನೀಡಿದ್ದ ಚುನಾವಣಾಉಸ್ತುವಾರಿಯನ್ನ ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ನನಗೊಂದು ಅವಕಾಶ ಕೊಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನ ಪರಿಗಣಿಸುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments