Webdunia - Bharat's app for daily news and videos

Install App

ಗ್ಯಾರಂಟಿ' ಬೆನ್ನಲ್ಲೇ ಮದ್ಯ ಪ್ರಿಯರಿಗೆ ಆಘಾತ!

Webdunia
ಮಂಗಳವಾರ, 6 ಜೂನ್ 2023 (14:53 IST)
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಘೋಷಣೆ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್​ ನೀಡುವ ಸಾಧ್ಯತೆ ಕಂಡುಬಂದಿದೆ. ಇದೀಗ ಐದು ಗ್ಯಾರಂಟಿಗಳ ಹೊರೆ ತಗ್ಗಿಸಲು ಅಬಕಾರಿ ಸುಂಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು ಗ್ಯಾರಂಟಿ ಯೋಜನೆಗಳು ಘೋಷಣೆ ಆದ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಈಡೇರಿಕೆಗೆ ಬೇಕಾದ ಸಂಪನ್ಮೂಲ ಕ್ರೋಢೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದರ ನೇರ ಹೊರೆಯನ್ನ ಮದ್ಯಪ್ರಿಯರ ಮೇಲೆ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರ ಶೇ.15ರಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ, ಕೊವಿಡ್ ಕಾಲದಲ್ಲಿ ಶೇ.5ರಷ್ಟು ಅಬಕಾರಿ‌ ಸುಂಕ‌ವನ್ನು ಹೆಚ್ಚಳ ಮಾಡಿತ್ತು. ಈಗ ಮತ್ತೆ ಗ್ಯಾರಂಟಿ ಹೆಸರಿನಲ್ಲಿ ಮದ್ಯದ ದರ ಹೆಚ್ಚಳ ಮಾಡುವ ಯೋಚನೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮದ್ಯಪ್ರಿಯರ ಮೇಲೆ ಈ ಹೊರೆಯನ್ನು ಹಾಕಲು ಸರ್ಕಾರ ಮುಂದಾಗಿದೆಯಾ ಎನ್ನುವ ವಿಚಾರ ಮುನ್ನೆಲೆಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments