ಛತ್ತೀಸ್‍ಗಢದಲ್ಲಿ ಹೆಲಿಕಾಪ್ಟರ್ ಪತನ- ಇಬ್ಬರು ಸಾವು

Webdunia
ಶುಕ್ರವಾರ, 13 ಮೇ 2022 (20:15 IST)
ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್‍ಗಢದ ರಾಯ್ಪುರ್‌ದ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಘಟನೆಯಲ್ಲಿ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ. ಪೈಲಟ್‍ಗಳು ಹೆಲಿಕಾಪ್ಟರ್ ಇಳಿಸಲು ಯತ್ನಿಸಿದ ಸಂದರ್ಭದಲ್ಲಿ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರೂ ಪೈಲಟ್‍ಗಳು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಕರಿರಲಿಲ್ಲ.ಮನ ಪೊಲೀಸ್ ಠಾಣೆ ವ್ಯಾಪ್ತಿಯ ರಾಯ್ಪುರ್‌ದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದ ಅಭ್ಯಾಸದ ವೇಳೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ತಿಳಿಸಿದ್ದಾರೆ.ಹೆಲಿಕಾಪ್ಟರ್ ದುರಂತದ ಬಗ್ಗೆ ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆ ಸಂತಾಪ ವ್ಯಕ್ತಪಡಿಸಿದ್ದಾರೆ. ನಿಖರವಾದ ಕಾರಣವನ್ನು ಖಚಿತ ಪಡಿಸಿಕೊಳ್ಳಲು ಡೈರಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಮತ್ತು ಛತ್ತೀಸ್‍ಗಢ ಸರ್ಕಾರವು ತಾಂತ್ರಿಕ ತನಿಖೆಯನ್ನು ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments