Select Your Language

Notifications

webdunia
webdunia
webdunia
webdunia

ಜೆಡಿಎಸ್ ಮುಖಂಡ ರಾಜೇಶ್ ಗುಂಡೂರಾವ್ ವಿಧಿವಶ

ಜೆಡಿಎಸ್ ಮುಖಂಡ ರಾಜೇಶ್ ಗುಂಡೂರಾವ್ ವಿಧಿವಶ
ಬೆಂಗಳೂರು , ಗುರುವಾರ, 13 ಸೆಪ್ಟಂಬರ್ 2012 (15:24 IST)
PR
ಮಾಜಿ ಮುಖ್ಯಮಂತ್ರಿ ದಿ.ಗುಂಡೂರಾವ್ ಅವರ ಎರಡನೇ ಪುತ್ರ ರಾಜೇಶ್ ಗುಂಡೂರಾವ್(41 ವರ್ಷ) ಅವರು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ.

ಕಳೆದ 10 ದಿನಗಳಿಂದ ಮೆದುಳು ರಕ್ತಸ್ರಾವದಿಂದ ಬಳಲುತ್ತಿದ್ದ ರಾಜೇಶ್ ಗುಂಡೂರಾವ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಜೆಡಿಎಸ್ ಯುವ ನಾಯಕರಾಗಿದ್ದ ರಾಜೇಶ್ ಗುಂಡೂರಾವ್ ಹೂವು-ಹಣ್ಣು, ಸಮರ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.

ರಾಜೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಮುಖಂಡ, ಶಾಸಕ ದಿನೇಶ್ ಗುಂಡೂರಾವ್ ಅವರ ಸಹೋದರ. ಇತ್ತೀಚೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹುದ್ದೆ ವಿಚಾರದಲ್ಲಿ ಜಟಾಪಟಿ ನಡೆದಿತ್ತು. ರಾಜೇಶ್ ಗುಂಡೂರಾವ್ ಜೆಡಿಎಸ್ ಜತೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದರೂ ಕೂಡ, ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪನವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಇದರಿಂದ ರಾಜೇಶ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

Share this Story:

Follow Webdunia kannada