Webdunia - Bharat's app for daily news and videos

Install App

ದಾವೂದ್ ಬಂಟ ಮಲಬಾರಿ ಬೆಂಗಳೂರಿಗೆ

Webdunia
ಗುರುವಾರ, 16 ಏಪ್ರಿಲ್ 2009 (15:17 IST)
ಇಲ್ಲಿನ ಕಾಡುಗೊಂಡನ ಹಳ್ಳಿಯಲ್ಲಿ 1998 ರಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ರಷೀದ್ ಮಲಬಾರಿಯನ್ನು ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಪೊಲೀಸರು ಬಂಧಿಸಿದ್ದ ಆತನನ್ನು ಹೆಚ್ಚಿನ ವಿಚಾರಣೆಗಾಗಿ ನಗರಕ್ಕೆ ಕರೆತರಲಾಯಿತು. ಬಳಿಕ ಆತನನ್ನು ಮೆಯೋಹಾಲ್‌ನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಹಾಜರುಪಡಿಸಲಾಯಿತು. ನ್ಯಾಯಾಧೀಶ ಶ್ರೀಕಾಂತ ವೈ ವಟವಟಿ ಅವರು ಆತನನ್ನು ಏ.19ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಆದೇಶಿಸಿದರು.

ಮಲಬಾರಿ ಮತ್ತು ಸಹಚರರು ಪ್ರತಿಷ್ಠಿತ ಕೈಗಾರಿಕೋದ್ಯಮಿಗಳು, ಶ್ರೀಮಂತ ವ್ಯಕ್ತಿಗಳು ಹಾಗೂ ರಾಜಕಾರಣಿಗಳಿಗೆ ಪ್ರಾಣ ಬೆದರಿಕೆ ಹಾಕಿ ಹಣ ವಸೂಲು ಮಾಡುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರೆನ್ನಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments