Webdunia - Bharat's app for daily news and videos

Install App

ನನ್ನ ತಂದೆಗೂ ಲಂಚದ ಆಮಿಷ ಒಡ್ಡಿದ್ರು: ಎಚ್‌ಡಿಕೆ ಬಾಂಬ್

Webdunia
ಗುರುವಾರ, 29 ಮಾರ್ಚ್ 2012 (18:22 IST)
PR
ಹಳೆ ವಾಹನಗಳ ನಿರ್ವಹಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 14 ಕೋಟಿ ರೂ.ಲಂಚದ ಆಮಿಷವೊಡ್ಡಿದ್ದರು ಎಂದು ಭಾರತೀಯ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಹೇಳಿಕೆ ಕೊಟ್ಟ ಬೆನ್ನಲ್ಲೇ, ತಮ್ಮ ತಂದೆ (ಎಚ್.ಡಿ.ದೇವೇಗೌಡ) ಪ್ರಧಾನಿಯಾಗಿದ್ದಾಗಲೂ ಲಂಚದ ಆಮಿಷವೊಡ್ಡಿದ್ದರು ಎಂದು ಪುತ್ರ, ಸಂಸದ ಎಚ್.ಡಿ.ಕುಮಾರಸ್ವಾಮಿ ಬಾಂಬ್‌ವೊಂದನ್ನು ಸಿಡಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ತಂದೆ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ರಕ್ಷಣಾ ಇಲಾಖೆಯಲ್ಲಿನ ವಾಹನ ನಿರ್ವಹಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಡೀಲ್ ಕುದುರಿಸಲು ದಲ್ಲಾಳಿ ನನ್ನ ಬಳಿ ಬಂದು ಲಂಚದ ಆಮಿಷವೊಡ್ಡಿರುವುದಾಗಿ ತಿಳಿಸಿದ್ದಾರೆ.

ರಕ್ಷಣಾ ಇಲಾಖೆಯ ಡೀಲ್‌ಗಾಗಿ ನನ್ನ ಮೂಲಕ ತಂದೆಯನ್ನು ಸಂಪರ್ಕಿಸುವ ಯತ್ನ ನಡೆಸಿದ್ದರು. ನಾನು ಈ ಮಾತನ್ನು ಹಲವು ಬಾರಿ ಹೇಳಿದ್ದೆ. ಕೃಷ್ಣ ಮೆನನ್ ಕಾಲದಲ್ಲಿ ಆರಂಭವಾದ ರಕ್ಷಣಾ ಇಲಾಖೆಯಲ್ಲಿನ ಅವ್ಯವಹಾರ ಈವರೆಗೂ ನಿಂತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಆದರೆ ತಂದೆ ಪ್ರಧಾನಿಯಾಗಿದ್ದಾಗ ಲಂಚದ ಆಮಿಷವೊಡ್ಡಲು ಬಂದವರು ಯಾರು ಎಂಬುದನ್ನು ಕುಮಾರಸ್ವಾಮಿ ಸ್ಪಷ್ಟಪಡಿಸಿಲ್ಲ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಸಂಸದೀಯ ವ್ಯವಹಾರ ಖಾತೆ ರಾಜ್ಯ ಸಚಿವ ರಾಜೀವ್ ಶುಕ್ಲಾ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಆ ಸಂದರ್ಭದಲ್ಲೇ ದೂರು ನೀಡಬೇಕಿತ್ತು. ದೂರು ನೀಡದಿರುವುದು ಕುಮಾರಸ್ವಾಮಿಯ ತಪ್ಪು ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ದಿ ಹಿಂದೂ ಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಆರ್ಮಿ ವರಿಷ್ಠ ವಿ.ಕೆ.ಸಿಂಗ್ ಅವರು, ಹಳೆ ವಾಹನ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ 14 ಕೋಟಿ ಲಂಚದ ಆಫರ್ ಕೊಟ್ಟಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ಬಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಕುಮಾರಸ್ವಾಮಿ ಬಾಂಬ್ ಸಿಡಿಸಿರುವುದು ಮತ್ತೊಂದು ತಿರುವು ಪಡೆದಂತಾಗಿದೆ.

English summary

In another shocking revelation in the ongoing defence procurement controversy, HD Kumaraswamy, son of former prime minister HD Deve Gowda on Thursday said that his father was offered a bribe for defence deals.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments