Webdunia - Bharat's app for daily news and videos

Install App

ನ.19ಕ್ಕೆ ನೂತನ ಪಕ್ಷ ಘೋಷಣೆ: ಬಿ.ಎಸ್.ಯಡಿಯೂರಪ್ಪ

Webdunia
ಶುಕ್ರವಾರ, 5 ಅಕ್ಟೋಬರ್ 2012 (10:59 IST)
PR
ತಾಲ್ಲೂಕಿನ ಆಯ್ದ ಮುಖಂಡರ ಜತೆ ಬುಧವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಸಕ್ತ ರಾಜಕಾರಣ ಕುರಿತು ಮುಖಂಡರ ಜತೆ ಚರ್ಚಿಸಿದ್ದು, ಇದೇ ನವೆಂಬರ್ 19ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾರಂಭದ ನಂತರ ಹೊಸಪಕ್ಷ ಘೋಷಣೆ ಮಾಡುವ ಕುರಿತು ಬಿಎಸ್‌ವೈ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಹೊಸ ಪಕ್ಷ ರಚನೆ ಕುರಿತು ಹಿರಿಯ ಮುಖಂಡರಿಂದ ಅಭಿಪ್ರಾಯ, ಸಲಹೆಯನ್ನೂ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನನ್ನ ಜತೆ ಸಹಕರಿಸಿ: ಬಿಎಸ್‌ವೈ
ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದ ತಾಲ್ಲೂಕಿನ ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ, ಪ್ರಸ್ತುತ ರಾಜಕಾರಣದಲ್ಲಿ ಯಾವುದೇ ಕ್ಷಣದಲ್ಲೂ ಏರುಪೇರು ಸಂಭವಿಸಿದರೂ ಹಿಂದಿನ ವರ್ಷಗಳಲ್ಲಿ ನೀವು ನನ್ನ ಜತೆ ಸಹಕರಿಸಿದಂತೆ, ಮುಂದಿನ ದಿನಗಳಲ್ಲೂ ನನ್ನ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಸೇರಿದಂತೆ ಇತರೆ ನಾಯಕರು ಈಗ ಬಗರ್‌ಹುಕುಂ ರೈತರ ಪರವಾಗಿ ಹೋರಾಟ ಮಾಡುತ್ತಿದ್ದಾರೆ. ಈ ಹಿಂದೆ ತಮ್ಮದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಇವರೆಲ್ಲಾ ಏಕೆ ಹೋರಾಟ ಮಾಡಲಿಲ್ಲ ಎಂದು ಅವರು ಪ್ರಶ್ನಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments