Webdunia - Bharat's app for daily news and videos

Install App

ಪಾರದರ್ಶಕ ಆಡಳಿತ ಎಲ್ಲಿದೆ ತೋರ್ಸಿ: ಕುಮಾರಸ್ವಾಮಿ ಪ್ರಶ್ನೆ

Webdunia
ಗುರುವಾರ, 30 ಜನವರಿ 2014 (11:10 IST)
PR
PR
ವಿಧಾನಸಭೆ ಅಧಿವೇಶನದ ಕೊನೆ ದಿನವಾದ ಇಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಸರ್ಕಾರದ ಆಡಳಿತ ವೈಖರಿ ವಿರುದ್ಧ ಹರಿಹಾಯ್ದರು. ಆಡಳಿತದಲ್ಲಿ ಪಾರದರ್ಶಕತೆ ಇಲ್ಲವೆಂದು ಸರ್ಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದರು. ಪಾರದರ್ಶಕ ಆಡಳಿತ ಎಂದು ಸಿದ್ದು ಹೇಳಿಕೊಳ್ತಾರೆ. ಆದರೆ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡ್ತಿಲ್ಲ. ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸರ್ಕಾರದ ಆಡಳಿತಯಂತ್ರ ಕುಸಿದಿದೆ ಎಂದು ಕುಮಾರಸ್ವಾಮಿ ಹೇಳಿದರು. 8 ತಿಂಗಳಾದರೂ ಸರ್ಕಾರ ಬಂದಿರುವ ಭಾವನೆ ಕಾಣ್ತಾಇಲ್ಲ.

ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅನಧಿಕೃತ ಗಣಿಗಾರಿಕೆ ಸಂಬಂಧಿಸಿದಂತೆ ಮಾಹಿತಿ ಕೊಡಿ ಎಂದು ಕೇಳಿದೆ. ಆದರೆ ಯಾವುದೇ ಮಾಹಿತಿ ಸಿಕ್ಕಿಲ್ಲ. ರಾಷ್ಟ್ರನಾಯಕರು ಟಿವಿಗೆ ಸಂದರ್ಶನ ಕೊಟ್ಟ ಸಂದರ್ಭದಲ್ಲಿ 31 ಬಾರಿ ಅವರು ಆರ್‌ಟಿಐ ಬಗ್ಗೆ ಚರ್ಚೆ ಮಾಡಿದರು. ಆದರೆ ಯಾವ ರೀತಿ ಪಾರದರ್ಶಕತೆ ಆಡಳಿತವನ್ನು ಅಧಿಕಾರಿಗಳು ಎಷ್ಟರಮಟ್ಟಿಗೆ ನಿರ್ವಹಿಸುತ್ತಿದ್ದಾರೆ. ನಿಜಕ್ಕೂ ನಿಮಗೆ ಪಾರದರ್ಶಕತೆ ಕುರಿತು ಬದ್ಧತೆ ಇದೆಯಾ ಅಥವಾ ಪ್ರಚಾರಕ್ಕೆ ಇಟ್ಟುಕೊಂಡಿದ್ದೀರೋ ಎಂದು ಗಮನಸಳೆಯಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಕೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments