Select Your Language

Notifications

webdunia
webdunia
webdunia
webdunia

ಪುಣ್ಯಕ್ಷೇತ್ರದಲ್ಲಿ ಚಂಪಾಷಷ್ಠಿ ಉತ್ಸವದ ಸಡಗರ

ಪುಣ್ಯಕ್ಷೇತ್ರದಲ್ಲಿ ಚಂಪಾಷಷ್ಠಿ ಉತ್ಸವದ ಸಡಗರ
ಮಂಗಳೂರು , ಗುರುವಾರ, 13 ಡಿಸೆಂಬರ್ 2018 (18:38 IST)
ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ‌ಉತ್ಸವ ಸಂಪನ್ನಗೊಂಡಿದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ ಹಿಂದಿನ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು, ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಮುಂಜಾನೆ 6.41 ರ ವೃಶ್ಚಿಕ ಲಗ್ನ ದಲ್ಲಿ ಸುಬ್ರಹ್ಮಣ್ಯ ದೇವರು ರಥಾರೂಢವಾಗಿದ್ದು, ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಮೊದಲು ಉಮಾಮಹೇಶ್ವರ ದೇವರ ಸಣ್ಣ ರಥ ಮುಂದೆ ಸಾಗಿದರೆ, ಅದರ ಹಿಂದೆ ಸುಬ್ರಹ್ಮಣ್ಯ ಬ್ರಹ್ಮರಥದಲ್ಲಿ ಸಾಗಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ.

400 ವರ್ಷಕ್ಕೂ ಹಳೆಯ ಬ್ರಹ್ಮರಥದಲ್ಲಿ ಕೊನೆಯ ಬಾರಿ ರಥೋತ್ಸವ ನಡೆದಿದ್ದು, ಮುಂದಿನ ಎಪ್ರಿಲ್ ತಿಂಗಳಿನಲ್ಲಿ ಉದ್ಯಮಿ ಮುತ್ತಪ್ಪ ರೈ ಎರಡು ಕೋಟಿ ವೆಚ್ಚದಲ್ಲಿ ನೂತನ ಬ್ರಹ್ಮರಥ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಲಿದ್ದಾರೆ. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಅಪರಾಧ ಚಟುವಟಿಕೆಯಲ್ಲಿ ತೊಡಗುವವರಿಗೆ ಖಡಕ್ ವಾರ್ನಿಂಗ್!