Webdunia - Bharat's app for daily news and videos

Install App

ಪ್ರಚೋದನಾಕಾರಿ ಭಾಷಣ ಮಾಡಿದ ಪ್ರತಾಪ್ ಸಿಂಹ ವಿರುದ್ಧ ದೂರು

Webdunia
ಶುಕ್ರವಾರ, 21 ಮಾರ್ಚ್ 2014 (17:30 IST)
PR
PR
ಬೆಂಗಳೂರು: ನಮ್ಮಇಬ್ಬರು ಸೈನಿಕರ ತಲೆ ಕಡಿದರೆ ಪಾಕಿಸ್ತಾನಿಯರ ನಾಲ್ಕು ತಲೆ ಕಡಿಯಯುವುದಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಸೂಚಿಸಬಹುದಿತ್ತು ಎಂದು ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ದ ಪ್ರಚೋದನಾ ಕಾರಿ ಭಾಷಣ ಮಾಡಿದ ಆರೋಪದ ಮೇಲೆ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸಿದ ನಂತರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ವಾಗ್ದಾಳಿ ಮಾಡಿದ್ದರು.

ಪಾಕಿಸ್ತಾನ ಭಾರತದ ಇಬ್ಬರು ಸೈನಿಕರ ತಲೆಯನ್ನು ಚೆಂಡಾಡಿದರು, ಪಾಕ್ ನಾಲ್ಕು ಸೈನಿಕರ ಚೆಂಡಾಡಿ ಎಂದು ಪ್ರಧಾನಿ ಸೈನಿಕರಿಗೆ ಗೌಪ್ಯ ಸಂದೇಶ ನೀಡಬೇಕಿತ್ತು ಎಂದು ಪ್ರತಾಪ್ ಸಿಂಹ ಹೇಳಿದ್ದರು. ಎನ್. ಲಕ್ಷ್ಮಣ್ ಅವರು ಈ ಕುರಿತು ಪ್ರತಾಪ್ ಸಿಂಹ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಬಿಜೆಪಿ ಸಂಸ್ಕೃತಿ ತಲೆ ಕಡಿಯುವುದಾಗಿದೆ ಎಂದು ಈ ಕುರಿತು ಮೈಸೂರು ಕಾಂಗ್ರೆಸ್ ಅಭ್ಯರ್ಥಿ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments