ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಗಂಔಈರವಾಗಿರುವ ಈ ಪ್ರಕರಣವನ್ನು ಎಸ್ಐಟಿ ಸಮರ್ಥವಾಗಿ ತನಿಖೆ ಮಾಡುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಸದ್ಯ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಕರೆತರುವ ಪ್ರಕ್ರಿಯೆಗಳು ನಡೆಯುತ್ತಿವೆ, ಕಾನೂನು ಪ್ರಕಾರ ಮುಂದುವರಿಯುತ್ತಿದ್ದೇವೆ ಎಂದರು.
ವಿಪಕ್ಷ ನಾಯಕರು ಪ್ರಜ್ವಲ್ ದೇಶದಿಂದ ಪರಾರಿಯಾಗಲು ಸರ್ಕಾರವೇ ಹೊಣೆ ಎಂದು ಬಿಜೆಪಿ ಆರೋಪಿಸುತ್ತಿರುವುದು ಸಹಜ. ಆದರೆ ನಮ್ಮ ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಿಲ್ಲ ಎಂದರು.
ಎಸ್‌ಐಟಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಕರಣದಲ್ಲಿ ಎಸ್ ಐಟಿಯವರು ನನಗೆ ಅಥವಾ ಮುಖ್ಯಮಂತ್ರಿಗೆ ಏನನ್ನು ವಿವರಿಸಬೇಕೋ ಅದನ್ನು ತಿಳಿಸುತ್ತಿದ್ದಾರೆ., ಅದರಲ್ಲಿ ಯಾವುದೇ ಅನುಮಾನ ಬೇಡ ಎಂದರು.<>