Select Your Language

Notifications

webdunia
webdunia
webdunia
webdunia

ಬಳ್ಳಾರಿ ಬ್ಯಾಟಲ್; ಬಿರುಸಿನ ಮತದಾನ ಆರಂಭ

ಬಳ್ಳಾರಿ ಬ್ಯಾಟಲ್; ಬಿರುಸಿನ ಮತದಾನ ಆರಂಭ
ಬೆಂಗಳೂರು , ಬುಧವಾರ, 30 ನವೆಂಬರ್ 2011 (10:34 IST)
PR
ಬಳ್ಳಾರಿ ಗ್ರಾಮಾಂತರ ಉಪಚುನಾವಣೆ ತೀವ್ರ ಕುತೂಹಲ ಕೆರಳಿಸಿರುವಂತೆ ಬುಧವಾರ ಬೆಳಗ್ಗಿಯಿಂದಲೇ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭಗೊಂಡಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ರಾಜ್ಯ ರಾಜಕೀಯ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬಳ್ಳಾರಿ ಉಪಚುನಾವಣಾ ಫಲಿತಾಂಶವನ್ನು ಎಲ್ಲರು ಕಾತರದಿಂದ ಕಾಯುತ್ತಿದ್ದಾರೆ. ಇದರಂತೆ ಕ್ಷೇತ್ರದ 1.72 ಲಕ್ಷ ಜನರು ಕಣದಲ್ಲಿರುವ ಎಂಟು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಎಲ್ಲ ಪಕ್ಷಗಳು ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿಕೊಂಡಿದ್ದು, ಅಲ್ಪ ಸಂಖ್ಯಾತರ ಮತದಾರರನ್ನು ಓಳೈಸಲು ಬಿರುಸಿನ ಕಸರತ್ತನ್ನೇ ನಡೆಸಿದೆ. ಪ್ರಸ್ತುತ ಚುನಾವಣೆಯಲ್ಲಿ ಅಲ್ಪ ಸಂಖ್ಯಾತರ ಮತವು ನಿರ್ಣಾಯಕವೆನಿಸಲಿದೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಪಕ್ಷವನ್ನು ತ್ಯಜಿಸಿದ ನಂತರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಶ್ರೀರಾಮುಲು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಿಂದ ಕಠಿಣ ಸವಾಲೇ ಎದುರಾಗುತ್ತಿದೆ.

ಒಟ್ಟು 195 ಮತಗಟ್ಟೆಗಳ ಪೈಕಿ 133 ಅತಿ ಸೂಕ್ಷ್ಮ, 53 ಸೂಕ್ಷ್ಮ ಹಾಗೂ 10 ಸಾಮಾನ್ಯ ಮತಗಟ್ಟೆಗಳಿವೆ. ಬಹುತೇಕ ಎಲ್ಲ ಕಡೆಗಳಲ್ಲೂ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಭಾರಿ ಭದ್ರತೆಯನ್ನೇ ಕೈಗೊಳ್ಳಲಿದ್ದಾರೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

Share this Story:

Follow Webdunia kannada