Select Your Language

Notifications

webdunia
webdunia
webdunia
webdunia

ಬಿಎಸ್‌ವೈಗೆ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿಲ್ಲ: ರೇಣುಕಾಚಾರ್ಯ

ಬಿಎಸ್‌ವೈಗೆ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿಲ್ಲ: ರೇಣುಕಾಚಾರ್ಯ
ಬೆಂಗಳೂರು , ಬುಧವಾರ, 29 ಫೆಬ್ರವರಿ 2012 (02:57 IST)
PR
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿಲ್ಲ. ಕೇವಲ ಅಪಪ್ರಚಾರ ಮತ್ತು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಅಬಕಾರಿ ಖಾತೆ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

ಬಿಎಸ್‌ವೈ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಮತ್ತು ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿಯವರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.

ಕೆಲವರು ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದು, ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಪತ್ರ ಬರೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸದಾನಂದಗೌಡರ ಬಗ್ಗೆ ನಾನು ಯಾವತ್ತು ಮಾತನಾಡಿಲ್ಲ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವಂತೆ ಹೇಳಿಕೆ ನೀಡಿದ್ದೇನೆ. ಬಿಜೆಪಿ ಪಕ್ಷವನ್ನು ಯಡಿಯೂರಪ್ಪ ಕಟ್ಟಿದ್ದಾರೆ. ಆದ್ದರಿಂದ, ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಿಸಿಕೊಡಲಿದ್ದಾರೆ ಎಂದು ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.

Share this Story:

Follow Webdunia kannada