Select Your Language

Notifications

webdunia
webdunia
webdunia
webdunia

ಬೆಳಗಾವಿಯಲ್ಲಿ ಎಂಇಎಸ್ ರ‌್ಯಾಲಿ; ಕನ್ನಡ ಸಂಘಟನೆಗಳ ಆಕ್ರೋಶ

ಬೆಳಗಾವಿಯಲ್ಲಿ ಎಂಇಎಸ್ ರ‌್ಯಾಲಿ; ಕನ್ನಡ ಸಂಘಟನೆಗಳ ಆಕ್ರೋಶ
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2010 (16:11 IST)
ರಾಜ್ಯೋತ್ಸವ ದಿನದಲ್ಲೇ ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ವಿವಿಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಒಂದು ವೇಳೆ ಎಂಇಎಸ್‌ ಕಾರ್ಯಕರ್ತರು ನಾಳೆ ಕರಾಳ ದಿನ ಆಚರಣೆ ಮಾಡಿದರೆ ಅದರಿಂದ ಉಂಟಾಗಬಹುದಾದ ಎಲ್ಲಾ ಪರಿಣಾಮಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಿರುತ್ತದೆ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ.

ನಾಡಹಬ್ಬ ಕನ್ನಡ ರಾಜ್ಯೋತ್ಸಮವ ದಿನದಂದು ಬೆಳಗಾವಿಯಲ್ಲಿ ಸೈಕಲ್ ರ‌್ಯಾಲಿ ನಡೆಸಲು ಎಂಇಎಸ್‌ಗೆ ಬೆಳಗಾಗಿ ಜಿಲ್ಲಾಡಳಿತ ಷರತ್ತು ಬದ್ದ ಅವಕಾಶ ಮಾಡಿಕೊಟ್ಟಿದೆ.

ಆದರೆ ಎಂಇಎಸ್ ಜಾಥಾಗೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ರಾಜ್ಯ ಸರಕಾರ ಓಟ್ ಬ್ಯಾಂಕ್ ರಾಜಕಾರಣಕ್ಕೆ ಮುಂದಾಗಿದೆ ಎಂದು ಗೌಡ ಟೀಕಿಸಿದರು.

ಮತ್ತೊಂದೆಡೆ ಹೇಳಿಕೆ ನೀಡಿರುವ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ. ಆರ್. ಕುಮಾರ್, ಕರಾಳ ದಿನ ಆಚರಿಸಲು ಸರ್ಕಾರ ಅನುಮತಿ ನೀಡಿದ್ದೇ ಆದ್ದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕನ್ನಡಿಗರಿಗೆ ಅನ್ಯಾಯವಾದರೆ ಸಹಿಸಲು ಸಾಧ್ಯವಿಲ್ಲ. ತಾಳ್ಮೆ ಕೆಣಕಲು ಯತ್ನ ನಡೆದರೆ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಹಿತಕರ ಘಟನೆಗೆ ಅವಕಾಶವಿಲ್ಲ: ಸಿಎಂ
ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭಾಷಾ ಸಾಮರಸ್ಯ ಕಾಪಾಡುವಂತೆ ಜನರಿಗೆ ಕರೆ ನೀಡಿದರು. ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲ ಎಂದವರು ತಿಳಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ

Share this Story:

Follow Webdunia kannada