Select Your Language

Notifications

webdunia
webdunia
webdunia
webdunia

ಭಯೋತ್ಪಾದನೆಗೆ ಯುಪಿಎ ಕಾರಣ: ಮೋದಿ

ಭಯೋತ್ಪಾದನೆಗೆ ಯುಪಿಎ ಕಾರಣ: ಮೋದಿ
ಬೆಂಗಳೂರು , ಬುಧವಾರ, 7 ಮೇ 2008 (10:09 IST)
ಭಯೋತ್ಪಾದನೆ ಬಗ್ಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮೃಧು ಧೋರಣೆಯಿಂದಾಗಿ ಇಂದು ರಾಷ್ಟ್ರದೆಲ್ಲೇಡೆ ಭಯೋತ್ಪಾದಕರ ಹಾವಳಿ ಹೆಚ್ಚಾಗುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಪೋಟಾ ಕಾಯ್ದೆಯನ್ನು ಯುಪಿಎ ಸರ್ಕಾರ ರದ್ದುಗೊಳಿಸಿರುವುದರಿಂದ ಭಯೋತ್ಪಾದಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಗುಜರಾತ್ ಮಾದರಿ ಅಭಿವೃದ್ದಿಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಗುಜರಾತ್‌ನಲ್ಲಿ ರೈತರಿಗೆ ದಿನದ 24ಗಂಟೆಯೂ ತ್ರೀಫೇಸ್ ವಿದ್ಯುತ್ ನೀಡಲಾಗುತ್ತಿದೆ. ಇಡೀ ರಾಜ್ಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸುಸೂತ್ರಗೊಳಿಸಲಾಗಿದೆ. ಇಂತಹ ಸರ್ವಾಂಗೀಣ ಪ್ರಗತಿ ಎನ್ನುವುದೇ ಗುಜರಾತ್ ಮಾದರಿಯಾಗಿದೆ. ಇದು ಕಾಂಗ್ರೆಸ್ಸಿಗರಿಗೆ ಬೇಡವೇ ಎಂದು ಪ್ರಶ್ನಿಸಿದರು.

ಗುಜರಾತ್‌ನಲ್ಲಿನ ಅಭಿವೃದ್ದಿ ಇಡೀ ದೇಶಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಅಂತಹ ಅಭಿವೃದ್ದಿ ಬೇಡವಾಗಿದೆ. ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿಕೊಂಡಿರುವ ಬಿಜೆಪಿಗೆ ಮತನೀಡಿಬೇಕೆಂದು ಮತದಾರರಲ್ಲಿ ಅವರು ಮನವಿ ಮಾಡಿದರು.

Share this Story:

Follow Webdunia kannada