Webdunia - Bharat's app for daily news and videos

Install App

ಮೋದಿ ಹೆಸರಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ

Webdunia
ಗುರುವಾರ, 20 ಏಪ್ರಿಲ್ 2023 (18:31 IST)
ರಾಮನಗರ ಜೆಡಿಎಸ್​​ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಬಳಿಕ ರಾಮನಗರದಲ್ಲಿ ನಿಖಿಲ್​​ ಕ್ಷೇತ್ರದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಈ ವೇಳೆ ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ವಿಚಾರ ಕುರಿತು ಮಾತನಾಡಿದ್ರು. ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ, ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಹೀಗಾಗಿ ಮೋದಿ ಹೆಸರು ಹೇಳ್ಕೊಂಡು ಚುನಾವಣೆ ಮಾಡ್ತಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ವಿರುದ್ಧದ ಅಲೆ ಇದೆ ಎಂದು ಹೇಳಿದ್ರು.. ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ನಿಖಿಲ್​​ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್, ಬಿಜೆಪಿ, ರೈತ ಸಂಘದವರು ಸೇರಿ ನನ್ನನ್ನು ಸೋಲಿಸಿದ್ರು. ರಾಮನಗರದಲ್ಲೂ ನನ್ನನ್ನು ಸೋಲಿಸಲು ಅದೇ ರೀತಿ ತಂತ್ರಗಾರಿಕೆ ಮಾಡ್ತಿದ್ದಾರೆ.. ಆದರೆ ರಾಮನಗರದ ಜನತೆ ಅದಕ್ಕೆ ಮಣೆಹಾಕಲ್ಲ. ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments