Select Your Language

Notifications

webdunia
webdunia
webdunia
webdunia

ಯುವ ಕಾಂಗ್ರೆಸ್ ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಯುವ ಕಾಂಗ್ರೆಸ್ ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು
belagavi , ಶುಕ್ರವಾರ, 17 ಡಿಸೆಂಬರ್ 2021 (19:07 IST)
ಇಂದು ರಾಜ್ಯ ಯುವ ಕಾಂಗ್ರೆಸ್ ನಿರುದ್ಯೋಗ ಸಮಸ್ಯೆ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಅವರು ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. ನಾವು ಉದ್ಯೋಗಕ್ಕೆ ಆಗ್ರಹಿಸಿ ಚಳವಳಿ ಮಾಡುತ್ತಿದ್ದೇವೆ. 
 
ವರ್ಷಕ್ಕೆ 2 ಕೋಟಿ ಉದ್ಯೋಗ ಕೋಡುತ್ತೇವೆ ಎಂದ ಕೇಂದ್ರದ ಬಿಜೆಪಿ ಸರಕಾರ ನುಡಿದಂತೆ ನಡೆಯಲಿಲ್ಲ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಪದವೀಧರರೆಲ್ಲರೂ ಬೀದಿಬದಿಯಲ್ಲಿ ವ್ಯಾಪಾರ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಯಾರಿಗೂ ಈ ಸರ್ಕಾರದಿಂದ ನೆರವಾಗಿಲ್ಲ.
 
ಅತಿಥಿ ಶಿಕ್ಷಕರಿಗೆ ಸಿಗುತ್ತಿರುವ ವೇತನಕ್ಕಿಂತ ನರೇಗಾ ಯೋಜನೆಯ ಕಾರ್ಮಿಕರ ಕೂಲಿಯೇ ಹೆಚ್ಚಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ನಿಮ್ಮ ಹೋರಾಟ ಅರ್ಥಪೂರ್ಣ ಹೊರಾಟ, ಯುವಕರ ಕಣ್ಣು ತೆರೆಸುವ ಹೋರಾಟ. ಇಡೀ ರಾಜ್ಯ ಕಾಂಗ್ರೆಸ್ ಈ ಹೋರಾಟಕ್ಕೆ ಬೆಂಬಲ ನೀಡಲಿದೆ.
 
ಮಾಧ್ಯಮಗಳಿಗೆ ಕೊಟ್ಟ ಪ್ರತಿಕ್ರಿಯೆ
 
ಕೋವಿಡ್ ಸಮಯದಲ್ಲಿ ಉದ್ಯೋಗ ಕಡಿಮೆಯಾಗಿದೆ. ಬಿಜೆಪಿ ಸರ್ಕಾರದಿಂದ ಸರ್ಕಾರಿ ಹಾಗೂ ಖಾಸಗಿ ಉದ್ಯೋಗ ಸೃಷ್ಟಿಸಲು ಸಾಧ್ಯವಾಗಿಲ್ಲ. ದೇಶದ ಯುವಕರು ಪಕೋಡ  ಮಾರಿಕೊಂಡು ಬದುಕಿರಿ ಎಂದು ಹೇಳುತ್ತಾರೆ. ಪಕೋಡ  ಮಾರೋಣ ಎಂದರೆ ಅಡುಗೆ ಎಣ್ಣೆ ಲೀಟರ್ ಗೆ 200 ರೂ. ಆಗಿದೆ. ಈ ಯುವಕರು ತಮ್ಮ ಪದವಿ ಪ್ರಮಾಣ ಪತ್ರದ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ವಾಪಸ್ ಕಳುಹಿಸಿಕೊಡುವ ಕಾರ್ಯಕ್ರಮವನ್ನು ಯೂತ್ ಕಾಂಗ್ರೆಸ್ ಹಮ್ಮಿಕೊಳ್ಳಲಿದೆ. ಕೇಂದ್ರ ಸರ್ಕಾರ ಉದ್ಯೋಗ ನೀಡಬೇಕು ಅಥವಾ ಕನಿಷ್ಠ 9 ಸಾವಿರ ರುಪಾಯಿಯಾದರೂ ಉದ್ಯೋಗ ಭತ್ಯೆ ನೀಡಬೇಕು. ಮುಂದಿನ ಚುನಾವಣೆಯಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಭತ್ಯೆ ನೀಡುವ ವಿಚಾರವನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸುವ ಚಿಂತನೆ ಮಾಡುತ್ತಿದ್ದೇವೆ. ಈ ಕುರಿತು ರಾಹುಲ್ ಗಾಂಧಿ ಅವರು ನ್ಯಾಯ್ ಯೋಜನೆ ಬಗ್ಗೆ ಸಂದೇಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಿರುದ್ಯೋಗ ವಿರುದ್ಧ ಕಾಂಗ್ರೆಸ್ ದೊಡ್ಡ ಹೋರಾಟ ಮಾಡಲಿದೆ. 
 
ಅಧಿವೇಶನ ಸಮಯದಲ್ಲಿ ಪಕ್ಷ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದು ನಮ್ಮ ಹೋರಾಟವಲ್ಲ. ಜನರ ಭಾವನೆಗೆ ತಕ್ಕಂತೆ ನಾವು ಹೆಜ್ಜೆ ಇಡುತ್ತಿದ್ದೇವೆ. ಅವರ ನೋವಿನಲ್ಲಿ ಭಾಗಿಯಾಗುತ್ತಿದ್ದೇವೆ, ಧ್ವನಿಯಾಗುತ್ತಿದ್ದೇವೆ. ರೈತರು ಸೇರಿದಂತೆ ಎಲ್ಲ ವರ್ಗದ ಬಗ್ಗೆ ಯೋಚಿಸುತ್ತಿದ್ದೇವೆ. ಕೋವಿಡ್ ಪರಿಹಾರ ಕೊಟ್ಟಿಲ್ಲ. ಎಲ್ಲರಿಗೂ ಉದ್ಯೋಗ ಕೊಡಿ ಎಂದು ಕೇಳುತ್ತಿದ್ದೇವೆ’ ಎಂದರು.
 
ರಮೇಶ್ ಕುಮಾರ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನನಗೆ ಆ ಬಗ್ಗೆ ಗೊತ್ತಿಲ್ಲ. ಆದರೆ ಗೃಹ ಸಚಿವರು ಕಾಂಗ್ರೆಸ್ ನವರು ತಮ್ಮನ್ನು ರೇಪ್ ಮಾಡುತ್ತಿದ್ದಾರೆ ಎಂದು ಹೇಳಿಕೆ ಕೊಟ್ಟಾಗ ವಿರೋಧ ಯಾಕೆ ಆಗಲಿಲ್ಲ? ಅತ್ಯಾಚಾರ ಆರೋಪಿಯನ್ನು ಮುಖ್ಯಮಂತ್ರಿಗಳು ಪಕ್ಕದಲ್ಲಿ ಕೂರಿಸಿಕೊಂಡು ಮಾತನಾಡುವುದಕ್ಕೆ ಯಾಕೆ ವಿರೋಧ ಮಾಡುತ್ತಿಲ್ಲ?’ ಎಂದು ಮರುಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶೇ.7.5 ಮೀಸಲಾತಿ ತಕ್ಷಣ ಜಾರಿಗೆ ಮುಖ್ಯಮಂತ್ರಿಗೆ ಆಗ್ರಹ