Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಆಡ್ವಾಣಿ ಜನಚೇತನ ರಥಯಾತ್ರೆ: 'ಕೈ' ಕಾರ್ಯಕರ್ತರ ಸೆರೆ

ರಾಜ್ಯಕ್ಕೆ ಆಡ್ವಾಣಿ ಜನಚೇತನ ರಥಯಾತ್ರೆ: 'ಕೈ' ಕಾರ್ಯಕರ್ತರ ಸೆರೆ
ಬೆಂಗಳೂರು , ಭಾನುವಾರ, 30 ಅಕ್ಟೋಬರ್ 2011 (18:08 IST)
PTI
ಭ್ರಷ್ಟಾಚಾರದ ವಿರುದ್ಧದ ಜನಚೇತನ ಯಾತ್ರೆ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿಯವರು ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಸ್ವಾಗತಿಸಿದರು.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭ್ರಷ್ಟಾಚಾರದ ವಿರುದ್ಧ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಜನಚೇತನ ಯಾತ್ರೆ ಭಾನುವಾರ ಉದ್ಯಾನನಗರಿ ಪ್ರವೇಶಿಸಿದ್ದು, ಆಡ್ವಾಣಿಯವರು ಎಚ್ಎಎಲ್ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬಸವನ ಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ತೆರಳಿದರು.

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಆಡ್ವಾಣಿಯವರಿಗೆ ಹೂ ಗುಚ್ಛ ನೀಡಿ ಮುಖ್ಯಮಂತ್ರಿ ಸದಾನಂದ ಗೌಡ ಬರಮಾಡಿಕೊಂಡರು. ನಂತರ ಕಾರಿನಲ್ಲಿ ಆಡ್ವಾಣಿ ಜತೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಆಗಮಿಸಿದರು. ನಂತರ ಬೃಹತ್ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಮಳೆರಾಯನ ಆರ್ಭಟದಿಂದಾಗಿ ಸಮಾವೇಶಕ್ಕೆ ಬಂದಿದ್ದ ಕಾರ್ಯಕರ್ತರು, ಅಭಿಮಾನಿಗಳು ಪರದಾಡುವಂತಾಯಿತು.

ಕಪ್ಪು ಬಾವುಟ ಪ್ರದರ್ಶನ ಕಾಂಗ್ರೆಸ್ ಮುಖಂಡರ ಬಂಧನ:
ರಾಜ್ಯದ ಬಿಜೆಪಿ ಮುಖಂಡರೇ ಭ್ರಷ್ಟಾಚಾರದಲ್ಲಿ ತೊಡಗಿ ಜೈಲು ಸೇರುತ್ತಿದ್ದು, ಈ ಹಿನ್ನೆಲೆಯಲ್ಲಿ ಆಡ್ವಾಣಿಯವರಿಗೆ ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ನಡೆಸುವ ನೈತಿಕ ಹಕ್ಕಿಲ್ಲ ಎಂದು ವಿರೋಧಿಸಿ ಕಪ್ಪು ಬಾವುಟ ಪ್ರದರ್ಶಿಸಿ ಕಾಂಗ್ರೆಸ್ ಮುಖಂಡರು ನಗರದ ಹಲವೆಡೆ ಪ್ರತಿಭಟನೆ ನಡೆಸಿದರು.

ಎಲ್.ಕೆ.ಆಡ್ವಾಣಿಯವರು ನಗರಕ್ಕೆ ಆಗಮಿಸುವ ಮುನ್ನ ನಗರದ ವಿವಿಧೆಡೆ ಕಾಂಗ್ರೆಸ್ ಮುಖಂಡರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಚ್ಎಎಲ್ ಬಳಿ ಸುಮಾರು 50ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಮುಖಂಡರನ್ನೂ ಪೊಲೀಸರು ಬಂಧಿಸಿದ್ದರು. ಆದರೆ ತಾವು ಯಾವುದೇ ರಸ್ತೆ ತಡೆ ನಡೆಸದೆ, ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಬಂಧಿಸಿರುವುದು ಸರಿಯಾದ ಕ್ರಮವಲ್ಲ ಎಂದು ಅವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share this Story:

Follow Webdunia kannada