ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ

Webdunia
ಶುಕ್ರವಾರ, 19 ನವೆಂಬರ್ 2021 (20:16 IST)
ಬೆಂಗಳೂರು: -ರಾಜ್ಯದಲ್ಲಿ ಮುಂದಿನ ನಾಲ್ಕು ದಿನದವರೆಗೂ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಮುಂದುವರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲೂ ಮುಂದಿನ ಮೂರು ದಿನ ಮಳೆಯಾಗಲಿದ್ದು, ಬೆಂಗಳೂರು ನಗರದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ ಎಂದು ಪಬ್ಲಿಕ್ ಟಿವಿಗೆ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ ಇದೆ. ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಬದಲಾಗಬಹುದು. ಬಂಗಾಳಕೊಲ್ಲಿಯಿಂದ ಕರಾವಳಿ ಕಡೆ ಸಾಗುತ್ತಿರುವ ವಾಯುಭಾರ ಕುಸಿತವಾಗಿದೆ. ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments