ಬಳ್ಳಾರಿ: ಲೋಕಸಭೆ ಚುನಾವಣೆಗೆ ಇನ್ನೇನೂ ತಿಂಗಳು ಇರುವಾಗ ಕರ್ನಾಟಕ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.60 ಕೋಟಿ ಹಣ, 106 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಬಳ್ಳಾರಿಯಲ್ಲಿ ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆ ಕರ್ನಾಟಕದಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಇಂದು ಬಳ್ಳಾರಿಯಲ್ಲಿ ಕೋಟ್ಯಾಂತರ ಹಣವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ವಶಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆ.
5.60 ಕೋಟಿ ನಗದು, 3 ಕೆಜಿ ಚಿನ್ನ ಮತ್ತು 103 ಕೆಜಿ ಬೆಳ್ಳಿ ಆಭರಣಗಳನ್ನು 68 ಬೆಳ್ಳಿಯ ಬಾರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನೂ ಹೆಚ್ಚಿನ ತನಿಖೆಯನ್ನು ನಡೆಸಲಿದ್ದು, ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.
ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.<>