Select Your Language

Notifications

webdunia
webdunia
webdunia
webdunia

ವಿದ್ಯುತ್ ಶಾಟ್ ಸರ್ಕ್ಯೂಟ್​: ದಂಪತಿ ಸಜೀವದಹನ

ವಿದ್ಯುತ್ ಶಾಟ್ ಸರ್ಕ್ಯೂಟ್​: ದಂಪತಿ ಸಜೀವದಹನ
ಯಾದಗಿರಿ , ಮಂಗಳವಾರ, 28 ಮಾರ್ಚ್ 2023 (16:40 IST)
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವದಹನವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ರಾಗಯ್ಯ ಹಾಗೂ ಶಿಲ್ಪಾ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಮೃತಪಟ್ಟ ದುರ್ದೈವಿ. ದಂಪತಿ ಮನೆಯಲ್ಲಿಯೇ ಬಟ್ಟೆ ಅಂಗಡಿಯನ್ನೂ ಇಟ್ಟುಕೊಂಡಿದ್ದರು. ಸೋಮವಾರ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿತ್ತು. ಮನೆಯೊಳಗೆ ದಟ್ಟ ಹೊಗೆ ಅವರಿಸಿಕೊಂಡಿದ್ದರಿಂದ ದಂಪತಿ ಮನೆಯಿಂದ ಹೊರಬರಲಾರದೇ ಪರದಾಡಿ ಕೊನೆಗೆ ಬೆಂಕಿಗಾಹುತಿಯಾಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಸದ್ಯ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಚ್ 31ಕ್ಕೆ ಅಭಿಪ್ರಾಯ ಸಂಗ್ರಹಿಸಲು ‘ಶಾ’ ಕರೆ