Select Your Language

Notifications

webdunia
webdunia
webdunia
webdunia

ವಿಧಾನಸಭೆ ಚುನಾವಣೆಗಳಲ್ಲಿ ಮೋದಿ ಪರ ಅಲೆ ಕೆಲಸ ಮಾಡಿಲ್ಲ: ಕುಮಾರಸ್ವಾಮಿ

ವಿಧಾನಸಭೆ ಚುನಾವಣೆಗಳಲ್ಲಿ ಮೋದಿ ಪರ ಅಲೆ ಕೆಲಸ ಮಾಡಿಲ್ಲ: ಕುಮಾರಸ್ವಾಮಿ
ಬೀದರ್ , ಸೋಮವಾರ, 9 ಡಿಸೆಂಬರ್ 2013 (16:20 IST)
PR
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪರ ಅಲೆ ಕೆಲಸ ಮಾಡಿಲ್ಲ. ಸ್ಥಳೀಯ ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಪಕ್ಷ ಜಯ ಸಾಧಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಎಲ್ಲಾ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸದಾ ಜನ ವಿರೋಧಿ ನೀತಿಗಳಿಗೆ ಬದ್ಧವಾಗಿರುವುದರಿಂದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲೂ ಮತದಾರರು ಕಾಂಗ್ರೆಸ್ ಬಿಜೆಪಿ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

Share this Story:

Follow Webdunia kannada