ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಜೊತೆ ನಡೆದುಕೊಂಡ ರೀತಿ ಹಾಗೂ ಅವರ ವರ್ತನೆಯೇ ನನ್ನನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಕಾರಣ ನೀಡದಿದ್ದದ್ದು ನನಗೆ ನೋವುಂಟು ಮಾಡಿದೆ. ನನ್ನ ಜೊತೆ ಸಿಎಂ ನಡೆದುಕೊಂಡ ರೀತಿ ಹಾಗೂ ಅವರ ವರ್ತನೆಯೇ ನನ್ನನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದೆ. ನಂಜನಗೂಡಿನಲ್ಲಿ ಮತ್ತೊಂದು ಚುನಾವಣೆ ಎದುರಾಗಿದ್ದಕ್ಕೆ ಜನತೆ ಬಳಿ ಕ್ಷಮೆ ಯಾಚಿಸುತ್ತೇನೆ ಎಂದು ತಿಳಿಸಿದರು.
ನನ್ನ ವಿರುದ್ಧ ಚುನಾವಣೆ ಎದುರಿಸಲು ಲೋಕೋಪಯೋಗಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಭೋಸ್‌ಗೆ ಟಿಕೆಟ್ ಕೊಡಲು ಕಾಂಗ್ರೆಸ್ ನಿರ್ಧರಿಸಿದೆ. ನಾನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಂಜನಗೂಡು ಉಪಚುನಾವಣೆಯನ್ನು ಎದುರಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಪ್ರಸಾದ್ ಜನವರಿ 2 ರಂದು ಬಿಜೆಪಿ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ