Select Your Language

Notifications

webdunia
webdunia
webdunia
webdunia

ಹೊಸ ವರ್ಷದಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ಪೊಲೀಸ್ ಮುನ್ನೆಚ್ಚರಿಕೆ

ಹೊಸ ವರ್ಷದಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ಪೊಲೀಸ್ ಮುನ್ನೆಚ್ಚರಿಕೆ
, ಮಂಗಳವಾರ, 31 ಡಿಸೆಂಬರ್ 2013 (15:07 IST)
PR
PR
ಬೆಂಗಳೂರು: 2014ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಕ್ಷಣಗಣನೆ ಷುರುವಾಗಿದೆ. ನಾಳೆ ನೂತನ ವರ್ಷಾರಂಭ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆ ನಂತರ ಪಾರ್ಕಿಂಗ್ ನಿಷೇಧ ವಿಧಿಸಲಾಗಿದೆ. ವೀಲಿಂಗ್ , ಡ್ರ್ಯಾಗ್ ರೇಸ್‌ಗೆ ಅವಕಾಶವಿಲ್ಲ. ಎಂ.ಜಿ.ರೋಡ್, ಬ್ರಿಗೇಡ್ ರೋಡ್‌ಗಳಲ್ಲಿ, ಚರ್ಚ್ ಸ್ಟ್ರೀಟ್‌ಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಫ್ಲೈಓವರ್ ಮೇಲಿನ ಸಂಚಾರಕ್ಕೂ ನಿಷೇಧ ವಿಧಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ದಯಾನಂದ್ ಹೇಳಿದರು.

ಇವತ್ತು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಮೋಜು, ಮಸ್ತಿಯಲ್ಲಿ ಯುವಕರು ತೊಡಗುವುದರಿಂದ ಅಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಬಾರಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ.

Share this Story:

Follow Webdunia kannada