Publish Date: Fri, 18 Aug 2017 (10:37 IST)
Updated Date: Fri, 18 Aug 2017 (10:39 IST)
ಬೆಂಗಳೂರು: ಕಾಂಗ್ರೆಸ್ ಸಚಿವರ ವಿರುದ್ಧ ಹೋರಾಡಲು ಹೊರಟ ತಮ್ಮ ಮೇಲೆ ಎಫ್ ಐಆರ್ ಬ್ರಹ್ಮಾಸ್ತ್ರ ಬಿಡಲು ಮುಂದಾದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಶಿವರಾಮ ಕಾರಂತ ಬಡಾವಣೆಯಲ್ಲಿನ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಮೂಲಕ ಕೇಸು ಜಡಿದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸಿದ್ದರಾಮಯ್ಯ ನಮ್ಮ ಮೇಲೆ ಧ್ವೇಷ ಕಾರಲು ಹೊರಟಿದ್ದಾರೆ. ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಆಗ ಅವರನ್ನು ನೋಡಿಕೊಳ್ತೇವೆ ಎಂದು ಧಮಕಿ ಹಾಕಿದ್ದಾರೆ.