ಬೆಂಗಳೂರು: ದೇಶದಾದ್ಯಂತ ಬೀದಿನಾಯಿಗಳ ನಿಯಂತ್ರಣ ಕುರಿತು ಚರ್ಚೆಯಾಗುತ್ತಿದೆ. ಈ ಮಧ್ಯೆ ಬೀದಿನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಮತ್ತು ಮೃತಪಟ್ಟ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿ ಆದೇಶ ಹೊರಡಿಸಿದೆ.
ಬೀದಿನಾಯಿಯಿಂದ ಗಾಯಗೊಂಡವರಿಗೆ ₹ 4 ಸಾವಿರ ಹಾಗೂ ಮೃತಪಟ್ಟವರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ನೀಡುವ ಪರಿಹಾರ ಹಣದಲ್ಲಿ ಚಿಕಿತ್ಸೆ ವೆಚ್ಚವಾಗಿ ₹ 1,500 ಹಾಗೂ ಗಾಯಗೊಂಡ ಸಂತ್ರಸ್ತರಿಗೆ ₹ 3,500 ಪಾವತಿಯಾಗಲಿದೆ. ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ ಅಥವಾ ರೇಬೀಸ್ನಿಂದ ಮೃತಪಟ್ಟವರಿಗೆ ₹ 5 ಲಕ್ಷ ಪರಿಹಾರ ನೀಡಲಾಗುತ್ತದೆ.
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ .