ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

Sampriya
ಗುರುವಾರ, 20 ನವೆಂಬರ್ 2025 (15:06 IST)
ಬೆಂಗಳೂರು: ದೇಶದಾದ್ಯಂತ ಬೀದಿನಾಯಿಗಳ ನಿಯಂತ್ರಣ ಕುರಿತು ಚರ್ಚೆಯಾಗುತ್ತಿದೆ. ಈ ಮಧ್ಯೆ ಬೀದಿನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಮತ್ತು ಮೃತಪಟ್ಟ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿ ಆದೇಶ ಹೊರಡಿಸಿದೆ.

ಬೀದಿನಾಯಿಯಿಂದ ಗಾಯಗೊಂಡವರಿಗೆ ₹ 4 ಸಾವಿರ ಹಾಗೂ ಮೃತಪಟ್ಟವರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ನೀಡುವ ಪರಿಹಾರ ಹಣದಲ್ಲಿ ಚಿಕಿತ್ಸೆ ವೆಚ್ಚವಾಗಿ ₹ 1,500 ಹಾಗೂ ಗಾಯಗೊಂಡ ಸಂತ್ರಸ್ತರಿಗೆ ₹ 3,500 ಪಾವತಿಯಾಗಲಿದೆ. ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ ಅಥವಾ ರೇಬೀಸ್‌ನಿಂದ ಮೃತಪಟ್ಟವರಿಗೆ ₹ 5 ಲಕ್ಷ ಪರಿಹಾರ ನೀಡಲಾಗುತ್ತದೆ.

ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments