Select Your Language

Notifications

webdunia
webdunia
webdunia
webdunia

ಮಾಂಸಾಹಾರಿಗಳ ಓಟು ನಮಗೆ ಬೇಡ- ದಿನೇಶ್ ಗುಂಡೂರಾವ್ ಸವಾಲ್

webdunia
bangalore , ಮಂಗಳವಾರ, 23 ಆಗಸ್ಟ್ 2022 (18:19 IST)
ಮಾಂಸಾಹಾರಿಗಳ ಓಟು ನಮಗೆ ಬೇಡ ಅಂತ ಬಿಜೆಪಿ ಅವರು ತಾಕತ್ತಿದ್ದರೆ ಹೇಳಲಿ ಎಂದು ಕಮಲ ನಾಯಕರಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲೊಡ್ಡಿದ್ದಾರೆ.ಕೊಡಗಿನ ಕೊಡ್ಲಿಪೇಟೆ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡುವ ಮುನ್ನ ಕೋಳಿ ಸಾರಿನ ಊಟ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಆರೋಪ ಮಾಡಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.ಈ ಮಧ್ಯೆ ಈ ಕುರಿತಂತೆ ದಿನೇಶ್ ಗುಂಡೂರಾವ್ ಅವರು ಸರಣಿ ಟ್ವೀಟ್ ಮಾಡಿದ್ದು, ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮ್ಯಯ ಅವರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೇ? ಭಕ್ತಿ ಶುದ್ಧವಾಗಿರಬೇಕು 
ಎಂದು ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಲ ವಾಪಸ್ ಕೇಳಿದ್ದಕ್ಕೆ ಬ್ಯಾಟ್ ನಿಂದ ಹಲ್ಲೆ