Select Your Language

Notifications

webdunia
webdunia
webdunia
webdunia

ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ 1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ

ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ 1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ
bangalore , ಸೋಮವಾರ, 14 ನವೆಂಬರ್ 2022 (20:31 IST)
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಕೆಎಸ್ಆರ್ಟಿಸಿ ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ತನ್ನ ಸಿಬ್ಬಂದಿಗಳಿಗೆ 1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಿದೆ. ಈ ಹಿಂದೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ 50 ಲಕ್ಷ ರೂ ವಿಮೆ ನೀಡುವುದಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಜೊತೆಗೆ ಒಡಂಬಡಿಕೆ ಮಾಡಿಕೊಂಡಿತ್ತು. ಈಗ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ರವರಿಂದ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂ. ಸೇರಿ ಒಟ್ಟು ರೂ.1 ಕೋಟಿ ಅಪಘಾತ ವಿಮೆ ನೀಡುವುದಾಗಿ ಕೆಎಸ್ಆರ್ಟಿಸಿ ಘೋಷಿಸಿದೆ. ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿರುತ್ತದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರಂತೆ ಕೀಳುಮಟ್ಟದ ರಾಜಕಾರಣ ಮಾಡಲ್ಲ- ಮಾಜಿ ಸಿಎಂ ಕುಮಾರಸ್ವಾಮಿ