ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಚೆಕ್‌ಪೋಸ್ಟ್‌ಗಳನ್ನ ನಿರ್ಮಿಸಲಾಗಿದ್ದು, ಬೀಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅದರಂತೆ ಇದೀಗ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಬೆಳ್ಳಿ, ಮದ್ಯವನ್ನ ವಶಕ್ಕೆ ಪಡೆಯಲಾಗಿದೆ. ಕಲಬುರಗಿಯ ಫರಹತಾಬಾದ್ ಚೆಕ್‌ಪೋಸ್ಟ್‌ನಲ್ಲಿ ದಾಖಲೆಯಿಲ್ಲದ 1 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.. ಯಾವುದೇ ದಾಖಲೆಯಿಲ್ಲದೆ ಕಾರಿನಲ್ಲಿ ಹಣ ಕೊಂಡ್ಯೊಯುತ್ತಿದ್ದ ರವಿ ಎನ್ನುವ ವ್ಯಕ್ತಿಯ ಕಾರು ತಪಾಸಣೆ ಮಾಡಿದಾಗ ಬರೊಬ್ಬರಿ 1 ಕೋಟಿ ರೂ. ನಗದು ಹಣ ಪತ್ತೆಯಾಗಿದೆ. ಇದೀಗ ಪೊಲೀಸರು ಮತ್ತು ಅಧಿಕಾರಿಗಳು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಅಂತೆಯೇ ಕೊಪ್ಪಳದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,29,214 ರೂ. ಮೌಲ್ಯದ 120 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಕನಕಗಿರಿ ಮತಕ್ಷೇತ್ರ ವ್ಯಾಪ್ತಿಯಲ್ಲಿ 43 ಲೀಟರ್, ಗಂಗಾವತಿ ಮತಕ್ಷೇತ್ರ ವಾಪ್ತಿಯಲ್ಲಿ 77 ಲೀಟರ್ ವಿವಿಧ ಬ್ರ್ಯಾಂಡ್ನ ಮದ್ಯ ಜಪ್ತಿ ಮಾಡಲಾಗಿದೆ. ಹಾಗೇ ಮೂವರನ್ನ ಬಂಧಿಸಲಾಗಿದೆ.