Webdunia - Bharat's app for daily news and videos

Install App

ಕಲಬುರಗಿಯಲ್ಲಿ 1 ಕೋಟಿ ರೂ.ಹಣ ಜಪ್ತಿ

Webdunia
ಶುಕ್ರವಾರ, 31 ಮಾರ್ಚ್ 2023 (19:40 IST)
ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಚೆಕ್‌ಪೋಸ್ಟ್‌‌ಗಳನ್ನ ನಿರ್ಮಿಸಲಾಗಿದ್ದು, ಬೀಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಅದರಂತೆ ಇದೀಗ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಬೆಳ್ಳಿ, ಮದ್ಯವನ್ನ ವಶಕ್ಕೆ ಪಡೆಯಲಾಗಿದೆ. ಕಲಬುರಗಿಯ ಫರಹತಾಬಾದ್ ಚೆಕ್‌ಪೋಸ್ಟ್‌‌ನಲ್ಲಿ ದಾಖಲೆಯಿಲ್ಲದ 1 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.. ಯಾವುದೇ ದಾಖಲೆಯಿಲ್ಲದೆ ಕಾರಿನಲ್ಲಿ ಹಣ ಕೊಂಡ್ಯೊಯುತ್ತಿದ್ದ ರವಿ ಎನ್ನುವ ವ್ಯಕ್ತಿಯ ಕಾರು ತಪಾಸಣೆ ಮಾಡಿದಾಗ ಬರೊಬ್ಬರಿ 1 ಕೋಟಿ ರೂ. ನಗದು ಹಣ ಪತ್ತೆಯಾಗಿದೆ. ಇದೀಗ ಪೊಲೀಸರು ಮತ್ತು ಅಧಿಕಾರಿಗಳು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಅಂತೆಯೇ ಕೊಪ್ಪಳದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,29,214 ರೂ. ಮೌಲ್ಯದ 120 ಲೀಟರ್ ಮದ್ಯ ಜಪ್ತಿ ಮಾಡಲಾಗಿದೆ. ಕನಕಗಿರಿ ಮತಕ್ಷೇತ್ರ ವ್ಯಾಪ್ತಿಯಲ್ಲಿ 43 ಲೀಟರ್​​​, ಗಂಗಾವತಿ ಮತಕ್ಷೇತ್ರ ವಾಪ್ತಿಯಲ್ಲಿ 77 ಲೀಟರ್​​ ವಿವಿಧ ಬ್ರ್ಯಾಂಡ್​​ನ ಮದ್ಯ ಜಪ್ತಿ ಮಾಡಲಾಗಿದೆ. ಹಾಗೇ ಮೂವರನ್ನ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments