Select Your Language

Notifications

webdunia
webdunia
webdunia
webdunia

ತೆಲಂಗಾಣದಲ್ಲಿ ಅಗ್ನಿಪಥ್ ಪ್ರತಿಭಟನೆಗೆ 1 ಬಲಿ, 15 ಮಂದಿಗೆ ಗಾಯ

ತೆಲಂಗಾಣದಲ್ಲಿ ಅಗ್ನಿಪಥ್ ಪ್ರತಿಭಟನೆಗೆ 1 ಬಲಿ, 15 ಮಂದಿಗೆ ಗಾಯ
telagana , ಶುಕ್ರವಾರ, 17 ಜೂನ್ 2022 (15:03 IST)
ಹೊಸ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆಗೆ 7 ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ತೆಲಂಗಾಣದಲ್ಲಿ ಒಬ್ಬ ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರ, ಉತ್ತರಪ್ರದೇಶ, ಹರಿಯಾಣ ಮತ್ತು ತೆಲಂಗಾಣದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.
ತೆಲಂಗಾಣದ ಸಿಕಂದರಾಬಾದ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಆಕ್ರೋಶಗೊಂಡ ಯುವಕರು ಮೂರು ರೈಲಿಗೆ ಬೆಂಕಿ ಹಚ್ಚಿದ್ದರಿಂದ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರಕಾರ ಸೇನೇಗೆ ಭರ್ತಿ ಕುರಿತ ವಯೋಮಿತಿ ಸೇರಿದಂತೆ ಹಲವು ನಿಯಮಗಳನ್ನು ಸಡಿಲಗೊಳಿಸುವುದಾಗಿ ಭರವಸೆ ನೀಡಿದೆ. ಆದರೂ ಪ್ರತಿಭಟನೆ ಕಡಿಮೆಯಾಗುವ ಸೂಚನೆ ಕಂಡು ಬರುತ್ತಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ೧೨ ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣ ಪತ್ತೆ