Select Your Language

Notifications

webdunia
webdunia
webdunia
webdunia

1 ಲಕ್ಷ 80 ಸಾವಿರ ಮಂದಿ ಸಿಲುಕಿರುವ ಶಂಕೆ

1 ಲಕ್ಷ 80 ಸಾವಿರ ಮಂದಿ ಸಿಲುಕಿರುವ ಶಂಕೆ
ಟರ್ಕಿ, , ಗುರುವಾರ, 9 ಫೆಬ್ರವರಿ 2023 (16:23 IST)
ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಈಗಾಗಲೇ 8000ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ 1 ಲಕ್ಷ 80 ಸಾವಿರ ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರೂ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿಯಲ್ಲಿ 5,894 ಮಂದಿ ಮೃತಪಟ್ಟಿದ್ದು, ಸಿರಿಯಾದಲ್ಲಿ 1932 ಮಂದಿ ಸಾವನ್ನಪ್ಪಿದ್ದಾರೆ. ಅಂತಿಮವಾಗಿ ಸಾವಿನ ಸಂಖ್ಯೆ 20,000 ಮೀರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿ ಹಾಗೂ ಸಿರಿಯಾದಾದ್ಯಂತ ಸುಮಾರು 23 ಮಿಲಿಯನ್ ಜನರು ಈ ದುರಂತದಿಂದ ಪ್ರಭಾವಿತರಾಗಿದ್ದಾರೆ.ಕಳೆದ 24 ಗಂಟೆಗಳಲ್ಲಿ ಮೂರು ಪ್ರಬಲ ಭೂಕಂಪದಿಂದ ತತ್ತರಿಸಿರುವ ಟರ್ಕಿ ದೇಶದ ನೆರವಿಗೆ ಭಾರತವು ಧಾವಿಸಿರುವ ಬೆನ್ನಲ್ಲೇ ಈಗ ಭಾರತಕ್ಕೆ ಧನ್ಯವಾದವನ್ನು ಅರ್ಪಿಸಿದೆ. 24 ಗಂಟೆಗಳಲ್ಲಿ ಟರ್ಕಿಯಲ್ಲಿ ಮೂರು ವಿನಾಶಕಾರಿ ಭೂಕಂಪಗಳು ಸಂಭವಿಸಿದ ನಂತರ ದೇಶಕ್ಕೆ ಹಣವನ್ನು ಒದಗಿಸಿದ ಉದಾರತೆಗಾಗಿ ಭಾರತವನ್ನು ದೋಸ್ತ್ ಎಂದು ಕರೆಯುತ್ತಾ, ಭಾರತಕ್ಕೆ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ನವದೆಹಲಿಗೆ ಧನ್ಯವಾದ ಅರ್ಪಿಸಿದರು ಮತ್ತು ಅಗತ್ಯಕಾಲದಲ್ಲಿ ನೆರವಿಗೆ ಬಂದವನೇ ನಿಜವಾಗಿಯೂ ಸ್ನೇಹಿತ ಎಂದು ಹೇಳಿದರು. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಮೂರು ತಿಂಗಳ ಅವಧಿಗೆ ಟರ್ಕಿಯ 10 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ಕೀಟನಾಶಕ ಜಾಲ ಬೇಧಿಸಿದ ಅಧಿಕಾರಿಗಳು