Select Your Language

Notifications

webdunia
webdunia
webdunia
webdunia

ಎರಡು, ಮೂರು ದಿನಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ : ಸಿಎಂ

1 lakh to families of Kovid who died in two to three days
bangalore , ಬುಧವಾರ, 22 ಸೆಪ್ಟಂಬರ್ 2021 (20:56 IST)
ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಒಂದ ಲಕ್ಷ ರೂ. ಪರಿಹಾರ ಹಣವು ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾದಿಂದ ಮೃತಪಟ್ಟಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ  ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಆದರೆ ಈವರೆಗೂ ಅದು ಫಲಾನುಭವಿಗಳ ಕೈ ಸೇರಿರಲಿಲ್ಲ.ಇದೀಗ ಬೊಮ್ಮಾಯಿ ಅವರು ಎರಡ್ಮೂರು ದಿನದಲ್ಲಿ ಪರಿಹಾರ ಹಣ ಬಿಡುಗಡೆ ಮಾಡುವುದಾಗಿ ವಿಶ್ವಾಸ ನೀಡಿದ್ದಾರೆ.ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಬೊಮ್ಮಾಯಿ ಅವರನ್ನು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, 7 ರಿಂದ 8 ಸಾವಿರ ಬಿಪಿಎಲ್ ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಇನ್ನು ಎರಡು, ಮೂರು ದಿನದೊಳಗಾಗಿ ಅವರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಶಾಲಾ ಸಂಘಟನೆಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಧರಣಿ