Select Your Language

Notifications

webdunia
webdunia
webdunia
webdunia

ಎರಡು, ಮೂರು ದಿನಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ : ಸಿಎಂ

ಎರಡು, ಮೂರು ದಿನಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ : ಸಿಎಂ
bangalore , ಗುರುವಾರ, 23 ಸೆಪ್ಟಂಬರ್ 2021 (22:13 IST)
[22:22, 9/21/2021] India Today Reporter. Mallu: ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಒಂದ ಲಕ್ಷ ರೂ. ಪರಿಹಾರ ಹಣವು ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೊರೋನಾದಿಂದ ಮೃತಪಟ್ಟಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ  ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಆದರೆ ಈವರೆಗೂ ಅದು ಫಲಾನುಭವಿಗಳ ಕೈ ಸೇರಿರಲಿಲ್ಲ.ಇದೀಗ ಬೊಮ್ಮಾಯಿ ಅವರು ಎರಡ್ಮೂರು ದಿನದಲ್ಲಿ ಪರಿಹಾರ ಹಣ ಬಿಡುಗಡೆ ಮಾಡುವುದಾಗಿ ವಿಶ್ವಾಸ ನೀಡಿದ್ದಾರೆ.ಈ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಬೊಮ್ಮಾಯಿ ಅವರನ್ನು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, 7 ರಿಂದ 8 ಸಾವಿರ ಬಿಪಿಎಲ್ ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಇನ್ನು ಎರಡು, ಮೂರು ದಿನದೊಳಗಾಗಿ ಅವರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂದರು.
[22:24, 9/21/2021] India Today Reporter. Mallu: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ; ಹಲವೆಡೆ ಯೆಲ್ಲೋ ಅಲರ್ಟ್
 
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಸೆ. 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತಾಂತರ ತಡೆಗೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ